Sunday, June 7, 2026
Homeತಾಜಾ ಸುದ್ದಿನಮ್ಮಮ್ಮ ಸೂಪರ್ ಸ್ಟಾರ್ ರಿಯಾಲಿಟಿ ಶೋ ನ ಸ್ಪರ್ಧಿ ಸಮನ್ವಿ ರಸ್ತೆ ಅಪಘಾತದಲ್ಲಿ ದಾರುಣ...

ನಮ್ಮಮ್ಮ ಸೂಪರ್ ಸ್ಟಾರ್ ರಿಯಾಲಿಟಿ ಶೋ ನ ಸ್ಪರ್ಧಿ ಸಮನ್ವಿ ರಸ್ತೆ ಅಪಘಾತದಲ್ಲಿ ದಾರುಣ ಸಾವು

- Advertisement -
- Advertisement -

ಬೆಂಗಳೂರು: ಕಲರ್ಸ್ ಕನ್ನಡದ ನಮ್ಮಮ್ಮ ಸೂಪರ್ ಸ್ಟಾರ್ ರಿಯಾಲಿಟಿ ಶೋನ ಸ್ಪರ್ಧಿಯಾಗಿದ್ದ ಸಮನ್ವಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಟಿಪ್ಪರ್ ಲಾರಿ – ದ್ವಿಚಕ್ರ ವಾಹನ ಅಪಘಾತವಾಗಿ ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ವಾಜರಹಳ್ಳಿ ಎಂಬಲ್ಲಿ ನಡೆದಿದೆ.

ದ್ವಿಚಕ್ರ ವಾಹನದಲ್ಲಿ ತಾಯಿ – ಮಗು ಕೋಣನಕುಂಟೆ ರಸ್ತೆಯಿಂದ ವಾಜರಹಳ್ಳಿ ಕಡೆಗೆ ತೆರಳ್ತಿದ್ದಾಗ ಟಿಪ್ಪರ್ ಢಿಕ್ಕಿ ಹೊಡೆದು ಅಪಘಾತವಾಗಿದ್ದು, ಪರಿಣಾಮ ಸಮನ್ವಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಅಪಘಾತದಲ್ಲಿ ಬಾಲಕಿಯ ತಾಯಿ ಅಮೃತಾ ನಾಯ್ಡು ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಮರಣೋತ್ತರ ಪರೀಕ್ಷೆಗೆ ಬಾಲಕಿ ಮೃತದೇಹ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಟಿಪ್ಪರ್ ಲಾರಿ ಚಾಲಕನನ್ನು ಕೆ.ಎಸ್.ಲೇಔಟ್ ಸಂಚಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕುಮಾರಸ್ವಾಮಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!