Friday, June 5, 2026
Homeಕರಾವಳಿಉಡುಪಿಕುಂದಾಪುರ;ದೇವಸ್ಥಾನದ ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಕುಂದಾಪುರ;ದೇವಸ್ಥಾನದ ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

- Advertisement -
- Advertisement -

ಕುಂದಾಪುರ: ವ್ಯಕ್ತಿಯೊಬ್ಬರು ದೇವಸ್ಥಾನದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಟೇಶ್ವರದ ಶ್ರೀಕೋಟಿಲಿಂಗೇಶ್ವರ ದೇವಸ್ಥಾನದ ಕೆರೆಯಲ್ಲಿ ನಡೆದಿದೆ.

ಕೋಟ ಹೀರೆ ಶ್ರೀಮಹಾಲಿಂಗೇಶ್ವರ ದೇವಳದ ಸಮೀಪದ ನಿವಾಸಿ ಜಿ.ಸುರೇಂದ್ರ(70) ಮೃತ ದುರ್ದೈವಿ.ಇವರು ಅನಾರೋಗ್ಯದಿಂದ ನ.2ರಂದು ಕೋಟೇಶ್ವರ ಖಾಸಗಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದರು. ನ.5ರಂದು ಬೆಳಗ್ಗೆ ಇವರು ಆಸ್ಪತ್ರೆಯಿಂದ ನಾಪತ್ತೆಯಾಗಿದ್ದರು.ಎಲ್ಲ ಕಡೆ ಹುಡುಕಾಡಿದರೂ ಅವರ ಪತ್ತೆಯಾಗಿರಲಿಲ್ಲ. ನ.5ರಂದು ಸಂಜೆ 5:45ರ ಸುಮಾರಿಗೆ ಕೋಟೇಶ್ವರ ಕೆರೆಯಲ್ಲಿ ಇವರ ಮೃತದೇಹ ಪತ್ತೆಯಾಗಿದೆ.

ಇವರು ಜೀವನದಲ್ಲಿ ಜಿಗುಪ್ಸೆಗೊಂಡುಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!