Thursday, June 4, 2026
Homeತಾಜಾ ಸುದ್ದಿನಂದಿನಿ ಹಾಲಿನ ದರ ಲೀಟರ್‌ಗೆ 3 ರೂ. ಹೆಚ್ಚಳ?

ನಂದಿನಿ ಹಾಲಿನ ದರ ಲೀಟರ್‌ಗೆ 3 ರೂ. ಹೆಚ್ಚಳ?

- Advertisement -
- Advertisement -

ಬೆಂಗಳೂರು: ನಂದಿನಿ ಹಾಲಿನ ಮಾರಾಟ ದರವನ್ನು ಲೀಟರ್‌ಗೆ 3 ರೂ. ಹೆಚ್ಚಿಸಲು ಕೆಎಂಎಫ್‌ ನಿರ್ಧರಿಸಿದೆ. ಕೆಎಂಎಫ್‌ನ ವಾರ್ಷಿಕ ಸಭೆಯಲ್ಲಿ ಹಾಲಿನ ಮಾರಾಟ ದರ ಹೆಚ್ಚಿಸುವ ಸಂಬಂಧ ಸರ್ವಾನುಮತದ ನಿರ್ಣಯ ಅಂಗೀಕರಿಸಲಾಗಿದ್ದು, ಸಭೆಯಲ್ಲಿ ಪಾಲ್ಗೊಂಡಿದ್ದ ರಾಜ್ಯದ 14 ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು ದರ ಏರಿಕೆಗೆ ಒಲವು ವ್ಯಕ್ತಪಡಿಸಿದ್ದಾರೆ ಎಂದು ಕೆಎಂಎಫ್‌ನ ಉನ್ನತ ಮೂಲಗಳು ತಿಳಿಸಿವೆ.

ರಾಜ್ಯದ ಎಲ್ಲಾ ಹಾಲು ಒಕ್ಕೂಟಗಳು ಹಾಲು ಮಾರಾಟ ದರ ಹೆಚ್ಚಿಸುವಂತೆ ಕಳೆದ 8 ತಿಂಗಳಿಂದ ಕೆಎಂಎಫ್‌ನ ಮೇಲೆ ಒತ್ತಡ ಹೇರುತ್ತಿವೆ. ರೈತರ ಅನುಕೂಲಕ್ಕಾಗಿ ಶೀಘ್ರವೇ ಹಾಲು ಮಾರಾಟ ದರದಲ್ಲಿ ಲೀಟರ್‌ಗೆ 3 ರೂ. ಹೆಚ್ಚಳ ಮಾಡಲೇಬೇಕು. ಬೆಲೆ ಹೆಚ್ಚಳದ ಸಂಪೂರ್ಣ ಲಾಭವನ್ನು ರೈತರಿಗೆ ತಲುಪಿಸಬೇಕೆಂದು ಸಭೆಯಲ್ಲಿ ಒಮ್ಮತದ ನಿರ್ಧಾರಕ್ಕೆ ಬರಲಾಯಿತು. ಈ ಕುರಿತು ಸರಕಾರದ ಅನುಮತಿ ಬಾಕಿ ಇದೆ.

- Advertisement -

Latest News

error: Content is protected !!