Friday, June 5, 2026
Homeತಾಜಾ ಸುದ್ದಿಹಬ್ಬದ ಹೊಸ್ತಿಲಲ್ಲಿರುವ ರಾಜ್ಯದ ಜನರಿಗೆ‌ ಮತ್ತೊಂದು ಶಾಕ್: ನಂದಿನಿ ಹಾಲಿನ ದರ ಏರಿಕೆ ಸಾಧ್ಯತೆ

ಹಬ್ಬದ ಹೊಸ್ತಿಲಲ್ಲಿರುವ ರಾಜ್ಯದ ಜನರಿಗೆ‌ ಮತ್ತೊಂದು ಶಾಕ್: ನಂದಿನಿ ಹಾಲಿನ ದರ ಏರಿಕೆ ಸಾಧ್ಯತೆ

- Advertisement -
- Advertisement -

ಬೆಂಗಳೂರು: ಗೌರಿ ಗಣೇಶ ಹಬ್ಬದ ಖುಷಿಯಲ್ಲಿರುವ ಜನತೆಗೆ ಮತ್ತೊಂದು ಶಾಕ್ ಎದುರಾಗುವ ಸಾಧ್ಯತೆ ಇದೆ. ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ನಂದಿನಿ ಹಾಲಿನ ಪಾಕೆಟ್ ದರ ಏರಿಕೆಗೆ ಪ್ರಸ್ತಾವನೆ ಸರ್ಕಾರಕ್ಕೆ  ಪ್ರಸ್ತಾವನೆ  ಸಲ್ಲಿಸಲಾಗಿದೆ ಎಂದು ಕರ್ನಾಟಕ ಹಾಲು ಒಕ್ಕೂಟ ನಿರ್ದೇಶಕ ಸತೀಶ್ ಹೇಳಿದ್ದಾರೆ. ಪ್ರತಿ ಲೀಟರ್‌ಗೆ ಹಾಲಿಗೆ ನಮ್ಮಲ್ಲಿ 37 ರೂ ಇದೆ. ಸದ್ಯ ಹಾಲಿನ ಬೆಲೆಯಲ್ಲಿ ಹೆಚ್ಚಳ ಮಾಡಿಲ್ಲ, ಲಾರಿ, ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯಲ್ಲಿ ಹೆಚ್ಚಳವಾಗಿದ್ದು, ಈ ನಿಟ್ಟಿನಲ್ಲಿ 3 ರೂಗಳನ್ನು ಹೆಚ್ಚಳ ಮಾಡುವುದಕ್ಕೆ ಸಿಎಂ ಮನವಿ ಸಲ್ಲಿಸಲಾಗಿದೆ ಅಂತ ತಿಳಿಸಿದರು. 3 ರೂ ಹೆಚ್ಛಳ ಮಾಡುವುದರಿಂದ ಅದರ ಹಣವನ್ನು ರೈತರಿಗೆ ನೀಡಲಾಗುವುದು ಅಂತ ಅವರು ಇದೇ ವೇಳೆ ತಿಳಿಸಿದ್ದಾರೆ.

- Advertisement -

Latest News

error: Content is protected !!