ಬೆಳ್ತಂಗಡಿ : ಮಳೆಗಾಲದಲ್ಲಿ ಸಾರ್ವಜನಿಕರ ಆರೋಗ್ಯ ಮತ್ತು ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ವಾರ್ಡ್ ನಂ.107ರ ಶ್ರೀ ಮಂಜುನಾಥ್ ರೆಂಕೆದಗುತ್ತು ಅವರ ನೇತೃತ್ವದಲ್ಲಿ “ಮನೆಗೊಂದು ಕೊಡೆ – ಮಮತೆಯ ಸ್ಪರ್ಶ” ಎಂಬ ವಿಶೇಷ ಸೇವಾ ಕಾರ್ಯಕ್ರಮದಡಿ ಮನೆಮನೆಗೆ ಕೊಡೆಗಳ ವಿತರಣೆ ಜೂ.21 ರಂದು ನಡೆಯಿತು.
ಮಳೆಗಾಲದಲ್ಲಿ ಶಾಲಾ ಮಕ್ಕಳು, ಹಿರಿಯ ನಾಗರಿಕರು ಹಾಗೂ ಸಾರ್ವಜನಿಕರು ಅನಗತ್ಯವಾಗಿ ಮಳೆಗೆ ನೆನೆದು ಆರೋಗ್ಯ ಸಮಸ್ಯೆಗಳಿಗೆ ಒಳಗಾಗದಂತೆ ಹಾಗೂ ಪ್ರತಿಯೊಂದು ಕುಟುಂಬಕ್ಕೂ ಉಪಯೋಗವಾಗುವ ಒಂದು ಸಣ್ಣ ಸಹಾಯವಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಮಂಜುನಾಥ್ ರೆಂಕೆದಗುತ್ತು ತಿಳಿಸಿದ್ದಾರೆ.
ವಾರ್ಡ್‌ನ ಪ್ರತಿಯೊಂದು ಕುಟುಂಬದೊಂದಿಗೆ ಆತ್ಮೀಯ ಬಾಂಧವ್ಯ ಬೆಳೆಸುವ ಹಾಗೂ ಸಮಾಜದ ಮೇಲಿನ ಕಾಳಜಿಯ ಸಂಕೇತವಾಗಿ ಈ ಸೇವಾ ಕಾರ್ಯವನ್ನು ಕೈಗೊಳ್ಳಲಾಗಿದ್ದು, ಸ್ಥಳೀಯ ನಿವಾಸಿಗಳು ಈ ಕಾರ್ಯಕ್ರಮವನ್ನು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ರಾಜ ಕೇಸರಿ ಸೇವಾ ಟ್ರಸ್ಟ್(ರಿ) ಬೆಳ್ತಂಗಡಿ ಇದರ ಸ್ಥಾಪಕ ಅಧ್ಯಕ್ಷರಾದ ದೀಪಕ್ ಜಿ, ಕಿರಣ್, ಸಂತೋಷ್. ಸಂದೀಪ್, ಸುದೀಪ್, ಕುಮಾರಸ್ವಾಮಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದು, ಮಳೆಗಾಲದ ಸಂದರ್ಭದಲ್ಲಿ ಜನೋಪಯೋಗಿ ಸೇವಾ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುವ ಸಂಕಲ್ಪ ವ್ಯಕ್ತಪಡಿಸಿದರು.


