- Advertisement -
- Advertisement -
ಬೆಳ್ತಂಗಡಿ: ಕುವೆಟ್ಟು ಗ್ರಾ.ಪಂ ಮಾಜಿ ಸದಸ್ಯ ನಾರಾಯಣ ಆಚಾರ್ ವಿಧಿವಶರಾಗಿದ್ದಾರೆ. ಅವರಿಗೆ 55 ವರ್ಷ ವಯಸ್ಸಾಗಿತ್ತು.
ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಸುಮಾರು ವರ್ಷಗಳ ಕಾಲ ಪಕ್ಷದ ಕೆಲಸಗಳನ್ನು ಮಾಡುತ್ತಾ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದರು. ನಾರಾಯಣ ಆಚಾರ್ ಅವರು ಇಂದು ಸಂಜೆ ಗುರುವಾಯನಕೆರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕಳೆದ ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಮಧ್ಯಾಹ್ನ ತೀವ್ರ ಅಸ್ವಸ್ಥಗೊಂಡಾಗ ಅವರನ್ನು ಗುರುವಾಯನಕೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಸಂಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ನಿಧನರಾದರೆನ್ನಲಾಗಿದೆ.
- Advertisement -