- Advertisement -
- Advertisement -
ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಇಂದು ಮಂಗಳೂರಿನಲ್ಲಿ ಆಚರಿಸಲಾಯಿತು.
ಮಂಗಳೂರಿನ ನಾರಾಯಣ ಗುರು ವೃತ್ತದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಭಾಗಿಯಾಗಿ ನಾರಾಯಣ ಗುರು ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.
ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಮತ್ತು ಇತರ ಮುಖಂಡರು ಭಾಗಿಯಾಗಿದ್ದರು.
ಇದಕ್ಕೂ ಮುನ್ನ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ನಾರಾಯಣ ಗುರುಗಳಿಗೆ ನಳೀನ್ ಕುಮಾರ್ ಕಟೀಲ್ ಮತ್ತು ವೇದವ್ಯಾಸ ಕಾಮತ್ ಪೂಜೆ ಸಲ್ಲಿಸಿದರು.
- Advertisement -