Saturday, June 6, 2026
Homeಕರಾವಳಿಬಂಟ್ವಾಳದಲ್ಲಿ ನಾರಾಯಣ ಗುರುಗಳ ಜಯಂತಿ ‌ಆಚರಣೆ

ಬಂಟ್ವಾಳದಲ್ಲಿ ನಾರಾಯಣ ಗುರುಗಳ ಜಯಂತಿ ‌ಆಚರಣೆ

- Advertisement -
- Advertisement -

ಬಂಟ್ವಾಳ: ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ಗುರುಜಯಂತಿ ಕಾರ್ಯಕ್ರಮದಲ್ಲಿ ಬಂಟ್ವಾಳದಲ್ಲಿ ನಡೆಯಿತು. ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಂ ಜಗದ್ಗುರು ಪೀಠದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಕಾರ್ಯಕ್ರಮದಲ್ಲಿ‌ ಭಾಗವಹಿಸಿದ್ದರು.

ದಕ್ಷಿಣ ಕನ್ನಡ ಸಂಸದ ಮತ್ತು ‌ಬಿಜೆಪಿ‌ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಂಟ್ವಾಳದ ಬಿಲ್ಲವ ಸಮಾಜ ಸೇವಾ ಸಂಘ(ರಿ)ದ ವತಿಯಿಂದ ಗುರು ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.‌

ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯಕ್ ಉಳಿಪ್ಪಾಡಿ, ಬಿಜೆಪಿ ಮುಖಂಡರಾದ ಹರಿಕೃಷ್ಣ ಬಂಟ್ವಾಳ, ತುಂಗಪ್ಪ ಬಂಗೇರ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರನ್ನು ಸನ್ಮಾನಿಸಲಾಯಿತು.

- Advertisement -

Latest News

error: Content is protected !!