Friday, April 19, 2024
Homeತಾಜಾ ಸುದ್ದಿಬ್ರಿಟನ್ ಸಚಿವ ಸ್ಥಾನಕ್ಕೆ ಇನ್ಫೋಸಿಸ್ ನಾರಾಯಣಮೂರ್ತಿ ಅಳಿಯ ರಿಷಿ ಸುನಕ್ ರಾಜೀನಾಮೆ

ಬ್ರಿಟನ್ ಸಚಿವ ಸ್ಥಾನಕ್ಕೆ ಇನ್ಫೋಸಿಸ್ ನಾರಾಯಣಮೂರ್ತಿ ಅಳಿಯ ರಿಷಿ ಸುನಕ್ ರಾಜೀನಾಮೆ

spot_img
- Advertisement -
- Advertisement -

ಲಂಡನ್: ಬ್ರಿಟಿಷ್ ಆರೋಗ್ಯ ಕಾರ್ಯದರ್ಶಿ ಸಾಜಿದ್ ಜಾವಿದ್ ಮತ್ತು ಹಣಕಾಸು ಖಾತೆ ಸಚಿವ ರಿಷಿ ಸುನಕ್ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಇನ್ಫೋಸಿಸ್‌ ನಾರಾಯಣಮೂರ್ತಿ ಅಳಿಯ ರಿಷಿ ಸುನಕ್ ಅವರು ತಮ್ಮ ರಾಜೀನಾಮೆ ಪತ್ರದಲ್ಲಿ, ‘ನಾನು ಸರ್ಕಾರವನ್ನು ತೊರೆಯಲು ದುಃಖಿತನಾಗಿದ್ದೇನೆ’. ಆದರೆ, ‘ಇದೇ ರೀತಿ ಮುಂದುವರಿಯಲು ಸಾಧ್ಯವಿಲ್ಲ’ ಎಂದು ಬರೆದುಕೊಂಡಿದ್ದಾರೆ.

‘ಸರ್ಕಾರವನ್ನು ಸರಿಯಾಗಿ, ಸಮರ್ಥವಾಗಿ ಮತ್ತು ಗಂಭೀರವಾಗಿ ನಡೆಸಬೇಕೆಂದು ಸಾರ್ವಜನಿಕರು ನಿರೀಕ್ಷಿಸುತ್ತಾರೆ. ಇದು ನನ್ನ ಕೊನೆಯ ಮಂತ್ರಿ ಕೆಲಸ ಎಂದು ನಾನು ನಂಬಿದ್ದೇನೆ. ಆದರೆ, ಈ ಮಾನದಂಡಗಳು ಹೋರಾಡಲು ಯೋಗ್ಯವಾಗಿದೆ ಎಂದು ನಾನು ನಂಬುತ್ತೇನೆ. ಅದಕ್ಕಾಗಿಯೇ ನಾನು ರಾಜೀನಾಮೆ ನೀಡುತ್ತಿದ್ದೇನೆ’ ಎಂದು ರಿಷಿ ಸುನಕ್ ಹೇಳಿದ್ದಾರೆ.

ಆರೋಗ್ಯ ಕಾರ್ಯದರ್ಶಿ ಸಾಜಿದ್ ಜಾವಿದ್ ಕೂಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅನೇಕ ಹಗರಣಗಳ ನಂತರ ಆಡಳಿತ ನಡೆಸುವ ಬೋರಿಸ್ ಜಾನ್ಸನ್ ಅವರ ಸಾಮರ್ಥ್ಯದ ಬಗ್ಗೆ ಜಾವಿದ್ ಅವರು ವಿಶ್ವಾಸ ಕಳೆದುಕೊಂಡಿರುವುದಾಗಿ ರಿಷಿ ಸುನಕ್ ಹೇಳಿದ್ದಾರೆ. ಅವರು ‘ಇನ್ನು ಮುಂದೆ ಉತ್ತಮ ಆತ್ಮಸಾಕ್ಷಿಯಂತೆ ಮುಂದುವರಿಯಲು ಸಾಧ್ಯವಿಲ್ಲ’. ರಾಷ್ಟ್ರೀಯ ಹಿತಾಸಕ್ತಿಯಲ್ಲಿ ಆಡಳಿತ ನಡೆಸುವ ಜಾನ್ಸನ್ ಅವರ ಸಾಮರ್ಥ್ಯದ ಬಗ್ಗೆ ಅನೇಕ ಶಾಸಕರು ಮತ್ತು ಸಾರ್ವಜನಿಕರು ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಆರೋಗ್ಯ ಕಾರ್ಯದರ್ಶಿ ಸಾಜಿದ್ ಜಾವಿದ್ ಹೇಳಿದ್ದಾರೆ.

- Advertisement -
spot_img

Latest News

error: Content is protected !!