Thursday, June 4, 2026
Homeಕರಾವಳಿಉಡುಪಿಸೆಪ್ಟೆಂಬರ್ 10 ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ನಾರಾಯಣಗುರು ಜಯಂತಿ

ಸೆಪ್ಟೆಂಬರ್ 10 ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ನಾರಾಯಣಗುರು ಜಯಂತಿ

- Advertisement -
- Advertisement -

ಮಂಗಳೂರು: ಸೆಪ್ಟೆಂಬರ್ 10 ರಂದು ರಾಜ್ಯ ಸರ್ಕಾರದ ವತಿಯಿಂದ ರಾಜ್ಯ ಮಟ್ಟದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಆಚರಿಸಲು ತೀರ್ಮಾನಿಸಲಾಗಿದೆ.

ಮಂಗಳೂರಿನಲ್ಲಿ ರಾಜ್ಯಮಟ್ಟದ ಜಯಂತಿ ಆಯೋಜಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ನೇತೃತ್ವದಲ್ಲಿ ಇಂದು ಪೂರ್ವಭಾವಿ ಸಭೆ ನಡೆಯಿತು.‌

ಮಂಗಳೂರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಸಭೆಯಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ದಕ್ಷಿಣ ಕನ್ನಡ ಡಿಸಿ ಡಾ. ರಾಜೇಂದ್ರ, ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾ‌ ಪಂಚಾಯತ್ ಸಿಇಓ ಕುಮಾರ್ ಮತ್ತು ವಿವಿಧ ಅಧಿಕಾರಿಗಳು ಪಾಲ್ಗೊಂಡಿದ್ದರು.

- Advertisement -

Latest News

error: Content is protected !!