ನವದೆಹಲಿ :ಕಾರ್ಗಿಲ್ ನಲ್ಲಿ ತಮ್ಮ ಪ್ರಾಣತ್ಯಾಗ ಮಾಡಿದವರ ಶೌರ್ಯ ಪ್ರತಿದಿನ ಭಾರತೀಯರನ್ನು ಪ್ರೇರೇಪಿಸುತ್ತದೆ ಎಂದು ಕಾರ್ಗಿಲ್ ವಿಜಯ್ ದಿವಸ್ ಅನ್ನು ನೆನಪಿಸಿಕೊಂಡು ನರೇಂದ್ರ ಮೋದಿ ಟ್ವೀಟ್ ಮೂಲಕ ಹೇಳಿದ್ದಾರೆ.
1999ರಲ್ಲಿ ಪಾಕಿಸ್ತಾನದೊಂದಿಗೆ ಹೋರಾಡಿ ಗೆದ್ದ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದವರಿಗೆ ಸೋಮವಾರ ಕಾರ್ಗಿಲ್ ವಿಜಯ್ ದಿವಸ್ ಪರವಾಗಿ ಪ್ರಧಾನಿ ಗೌರವ ಸಲ್ಲಿಸಿದ್ದಾರೆ.ಇಂದು, ಕಾರ್ಗಿಲ್ ವಿಜಯ್ ದಿವಸ್ ನಲ್ಲಿ ಭಾರತೀಯ ಸೈನಿಕರ ತ್ಯಾಗವನ್ನು ನಾವು ನೆನಪಿಸಿಕೊಳ್ಳುತ್ತೇವೆ. ಅವರ ಶೌರ್ಯವನ್ನು ನಾವು ನೆನಪಿಸಿಕೊಳ್ಳುತ್ತೇವೆ.
ನಾವು ನಮ್ಮ ದೇಶವನ್ನು ರಕ್ಷಿಸುವ ಕಾರ್ಗಿಲ್ ನಲ್ಲಿ ಪ್ರಾಣ ಕಳೆದುಕೊಂಡ ಎಲ್ಲರಿಗೂ ಗೌರವ ಸಲ್ಲಿಸುತ್ತೇವೆ. ಅವರ ಶೌರ್ಯವು ಪ್ರತಿದಿನ ನಮ್ಮನ್ನು ಪ್ರೇರೇಪಿಸುತ್ತದೆ ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಈ ಬಾರಿ ಕಾರ್ಗಿಲ್ ವಿಜಯ್ ದಿವಸ್ದ 22ನೇ ವಾರ್ಷಿಕೋತ್ಸವವನ್ನು ಆಚರಿಸಲಾಗುತ್ತಿದೆ. ಇದನ್ನು ಕೇಂದ್ರ ಸರ್ಕಾರ ಅಮೃತ ಮಹೋತ್ಸವ ಅಂದರೆ ಜನರ ಚಳವಳಿಯನ್ನಾಗಿ ಆಚರಿಸುತ್ತಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದ ರಾಷ್ಟ್ರೀಯ ಅನುಷ್ಠಾನ ಸಮಿತಿ ನಿರ್ವಹಣೆ ಮಾಡಲಿದೆ ಎಂದು ಭಾನುವಾರ ಮನ್ ಕಿ ಬಾತ್ ನಲ್ಲಿ ಮೋದಿ ತಿಳಿಸಿದ್ದರು.


