Friday, June 5, 2026
Homeತಾಜಾ ಸುದ್ದಿರಾಜ್ಯಕ್ಕೆ ಕನ್ನಡ ರಾಜ್ಯೋತ್ಸವದ ಸಂಭ್ರಮ!.. ಕನ್ನಡದಲ್ಲಿ ಶುಭಕೋರಿ ಸಂತಸ ಹಂಚಿಕೊಂಡ ಪ್ರಧಾನಿ ಮೋದಿ;

ರಾಜ್ಯಕ್ಕೆ ಕನ್ನಡ ರಾಜ್ಯೋತ್ಸವದ ಸಂಭ್ರಮ!.. ಕನ್ನಡದಲ್ಲಿ ಶುಭಕೋರಿ ಸಂತಸ ಹಂಚಿಕೊಂಡ ಪ್ರಧಾನಿ ಮೋದಿ;

- Advertisement -
- Advertisement -

ಬೆಂಗಳೂರು: ಇಂದಿನ ಕನ್ನಡ ರಾಜ್ಯೋತ್ಸವದ ಸಂಭ್ರಮಕ್ಕೆದೇಶದ ಪ್ರಧಾನಿ ನರೇಂದ್ರ ಮೋದಿಯವರು ಕನ್ನಡಿಗರಿಗೆ ವಿಶೇಷವಾಗಿ ಶುಭಕೋರಿದ್ದಾರೆ . ಕನ್ನಡಿಗರ ಪಾಲಿನ ಹಬ್ಬ ಈ ಬಾರಿ ಕೊರೊನಾ ಕಾರಣದಿಂದ ಸಪ್ಪೆ ಎನಿಸಿದರೂ ನರೇಂದ್ರ ಮೋದಿಯವರು ಕನ್ನಡದಲ್ಲಿಯೇ ಟ್ವೀಟ್‌ ಮಾಡಿ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸುವ ಮೂಲಕ ಕನ್ನಡಿಗರಿಗೆ ಸಂತೋಷ ತಂದಿದ್ದಾರೆ. ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

“ಕರ್ನಾಟಕದ ನನ್ನ ಸಹೋದರ ಮತ್ತು ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಕನ್ನಡಿಗರ ಜನ ಶಕ್ತಿ ಮತ್ತು ಕೌಶಲ್ಯದಿಂದ ಕರ್ನಾಟಕ ಪ್ರಗತಿಯ ಉತ್ತುಂಗಕ್ಕೇರುತ್ತಿದೆ. ಕರ್ನಾಟಕದ ಜನತೆಯ ಸಂತಸ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ” ಎಂದು ಇಂದು ಬೆಳಿಗ್ಗೆ ನರೇಂದ್ರ ಮೋದಿಯವರು ಟ್ವೀಟ್ ಮಾಡಿದ್ದಾರೆ.

- Advertisement -

Latest News

error: Content is protected !!