Friday, June 14, 2024
Homeಕರಾವಳಿದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಗೆ ರಾಷ್ಟ್ರ ಪ್ರಶಸ್ತಿಯ ಗರಿ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಗೆ ರಾಷ್ಟ್ರ ಪ್ರಶಸ್ತಿಯ ಗರಿ

spot_img
- Advertisement -
- Advertisement -

ಮಂಗಳೂರು : ಪಂಚಾಯತ್ ಪುರಸ್ಕಾರದಡಿ ಕೇಂದ್ರ ಸರಕಾರ ನೀಡುವ ʼದೀನ್ ದಯಾಳ್ ಉಪಾಧ್ಯಾಯ ಪಂಚಾಯತ್ ಸಶಕ್ತಿಕರಣ್ ಪುರಸ್ಕಾರ-2022ʼಕ್ಕೆ ದಕ್ಷಿಣಕನ್ನಡ ಜಿಲ್ಲಾ ಪಂಚಾಯತ್ ಆಯ್ಕೆಯಾಗಿದೆ.

ಪ್ರತೀ ವರ್ಷ ಎ.24ರಂದು ರಾಷ್ಟ್ರೀಯ ಪಂಚಾಯತ್ ದಿನವನ್ನಾಗಿ ಆಚರಣೆ ಮಾಡಲಾಗುತ್ತಿದ್ದು, ಈ ಸಂದರ್ಭ ದೇಶಾದ್ಯಂತ ಪ್ರತೀ ರಾಜ್ಯದಿಂದ ಉತ್ತಮ ಸಾಧನೆ ಮಾಡಿದ ಒಂದು ಜಿಪಂನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ. ಅದರಂತೆ 2022ನೆ ಸಾಲಿನ ಪ್ರಶಸ್ತಿಗೆ ದ.ಕ.ಜಿಪಂ ಆಯ್ಕೆಯಾಗಿದೆ ಎಂದು ಜಿಪಂ ಸಿಇಒ ಡಾ. ಕುಮಾರ್ ತಿಳಿಸಿದ್ದಾರೆ.

ಜಿಪಂ ವ್ಯಾಪ್ತಿಯ ಸಾಮಾನ್ಯ ವಿಭಾಗದಲ್ಲಿ ನಿಗದಿಪಡಿಸಿದ ಎಲ್ಲಾ ಅಂಶಗಳಲ್ಲೂ ಉತ್ತಮ ಸಾಧನೆ ಮಾಡಿರುವುದನ್ನು ಪರಿಗಣಿಸಿ ಮತ್ತು 2021-22ನೆ ಸಾಲಿನಲ್ಲಿ ಉತ್ತಮ ಕಾರ್ಯಕ್ಷಮತೆಯನ್ನು ಪರಿಗಣಿಸಿ ಹಾಗೂ ಪ್ರಗತಿಯನ್ನು ಆಧರಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಅದರಂತೆ ಸ್ವಚ್ಛ ಭಾರತ್ ಮಿಷನ್, ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ, ಕುಡಿಯುವ ನೀರು, ಕರವಸೂಲಿ, ಗ್ರಂಥಾಲಯಗಳ ನವೀಕರಣ, ಅಭಿವೃದ್ಧಿ ಅನುದಾನದ ಬಳಕೆ ಇತ್ಯಾದಿಯನ್ನು ಪರಿಗಣಿಸಿ ಈ ಪ್ರಶಸ್ತಿ ಲಭಿಸಿದೆ.

ಎ.24ರಂದು ನಡೆಯುವ ಪಂಚಾಯತ್ ರಾಜ್ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ ಎಂದು ಜಿಪಂ ಸಿಇಒ ಡಾ.ಕುಮಾರ್ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!