Thursday, April 25, 2024
Homeಕರಾವಳಿಮಾಳ ಗೇಟ್ ನಿಂದ ಕಾರ್ಕಳದವರೆಗೆ ರಸ್ತೆ ಚತುಷ್ಫಥೀಕರಣಕ್ಕೆ ಹೆದ್ದಾರಿ ಸಚಿವಾಲಯ ಅನುಮೋದನೆ

ಮಾಳ ಗೇಟ್ ನಿಂದ ಕಾರ್ಕಳದವರೆಗೆ ರಸ್ತೆ ಚತುಷ್ಫಥೀಕರಣಕ್ಕೆ ಹೆದ್ದಾರಿ ಸಚಿವಾಲಯ ಅನುಮೋದನೆ

spot_img
- Advertisement -
- Advertisement -

ನವದೆಹಲಿ: ರಾಷ್ಟ್ರೀಯ ಹೆದ್ದಾರಿ 169 ರ ಮಾಳ ಗೇಟ್ ನಿಂದ ಕಾರ್ಕಳ ತನಕದ ದ್ವಿಪಥ ರಸ್ತೆಯನ್ನು ಚತುಷ್ಪಥಿಕರಣಕ್ಕೆ ರಾಷ್ಟ್ರೀಯ ಹೆದ್ದಾರಿ ಸಚಿವಾಲಯ ಅನುಮೋದನೆ ನೀಡಿದೆ.

15.27 ಕಿಲೋ ಮೀಟರ್ ಉದ್ದದ ರಸ್ತೆಯನ್ನು ಚತುಷ್ಪಥಿಕರಣಗೊಳಿಸಲು 177.84 ಕೋಟಿ ರೂಪಾಯಿಯನ್ನು ಬಿಡುಗಡೆಗೊಳಿಸಲು ರಾಷ್ಟ್ರೀಯ ಹೆದ್ದಾರಿ ಸಚಿವಾಲಯವು ಅನುಮೋದನೆಯನ್ನು ನೀಡಿದೆ.

ಶೀಘ್ರವೇ ಟೆಂಡರ್ ಪ್ರಕ್ರಿಯೆ ಆರಂಭಗೊಳ್ಳಲಿದ್ದು ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಕಾಮಗಾರಿ ಆರಂಭಗೊಳ್ಳಲಿದೆ.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿ ಚಿಕ್ಕಮಗಳೂರು ಹಾಗೂ ಕಾರ್ಕಳ ಭಾಗದ ಜನರಿಗೆ ಪ್ರಯಾಣಿಸಲು ಅನುಕೂಲವಾಗುವಂತೆ ಚತುಷ್ಪಥೀಕರಣಕ್ಕೆ ಅನುಮೋದನೆ ನೀಡಲು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಇತ್ತೀಚೆಗೆ ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಇಲಾಖೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು.

- Advertisement -
spot_img

Latest News

error: Content is protected !!