Wednesday, September 30, 2026
Homeಕರಾವಳಿಅ.1ರಂದು ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನಾಚರಣೆ ಹಾಗೂ ರಕ್ತದಾನ ಶಿಬಿರ

ಅ.1ರಂದು ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನಾಚರಣೆ ಹಾಗೂ ರಕ್ತದಾನ ಶಿಬಿರ

- Advertisement -
- Advertisement -

ಮಂಗಳೂರು: ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕ ಹಾಗೂ ಯೂತ್ ರೆಡ್‌ಕ್ರಾಸ್ ಮಂಗಳೂರು ವಿಶ್ವವಿದ್ಯಾಲಯ ಘಟಕದ ಸಹಯೋಗದಲ್ಲಿ ಅ.1ರಂದು ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನಾಚರಣೆ ಹಾಗೂ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಅಂದು ಬೆಳಗ್ಗೆ 11:30ಕ್ಕೆ ರೆಡ್‌ಕ್ರಾಸ್ ಶತಮಾನೋತ್ಸವ ಭವನದ ಪ್ರೇರಣಾ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ.

ರೆಡ್‌ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದು, ರೋಟರಿ ಜಿಲ್ಲೆ 3180ರ ಮಾಜಿ ಗವರ್ನರ್ ಕೆ. ಕೃಷ್ಣ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಈ ಕುರಿತು ರೆಡ್‌ಕ್ರಾಸ್ ಜಿಲ್ಲಾ ಘಟಕದ ಕಾರ್ಯದರ್ಶಿ ಡಾ. ಸತೀಶ್ ಕುಮಾರ್ ಶೆಟ್ಟಿ ಪಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Latest News

error: Content is protected !!