Saturday, June 6, 2026
Homeಕರಾವಳಿಉಡುಪಿ ಹಾಗೂ ಮಂಗಳೂರಿನಲ್ಲಿ ಸಂಭ್ರಮದ ನವರಾತ್ರಿ!

ಉಡುಪಿ ಹಾಗೂ ಮಂಗಳೂರಿನಲ್ಲಿ ಸಂಭ್ರಮದ ನವರಾತ್ರಿ!

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಾದ್ಯಂತ ಅ. 7ರಿಂದ ನವರಾತ್ರಿ, ದಸರಾ ಸಂಭ್ರಮ ಆರಂಭಗೊಂಡಿದ್ದು, ಉಭಯ ಜಿಲ್ಲೆಗಳ ದೇವಾಲಯಗಳಲ್ಲಿ ಸಿದ್ಧತೆ ನಡೆಯುತ್ತಿವೆ.ಕರಾವಳಿಯ ಪ್ರಮುಖ ದೇವಸ್ಥಾನಗಳಲ್ಲಿ 9 ದಿನಗಳ ಕಾಲ ನವರಾತ್ರಿ ಅಂಗವಾಗಿ ವಿಶೇಷ ಪೂಜೆ, ಹತ್ತನೇ ದಿನ ವಿಜಯದಶಮಿ ಕಾರ್ಯಕ್ರಮ ನೆರವೇರಲಿದೆ.

ಜಿಲ್ಲೆಯ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ, ಶ್ರೀ ಮಂಗಳಾದೇವಿ ದೇವಸ್ಥಾನ ,ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಪೊಳಲಿ ಶ್ರೀ ರಾಜರಾಜೇಶ್ವರೀ, ಕಟೀಲು ಶ್ರೀ ದುರ್ಗಾ ಪರಮೇಶ್ವರೀ, ಹಾಗೂ ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕೆ, ಕಡಿಯಾಳಿ ಮಹಿಷಮರ್ದಿನಿ, ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ, ಕಮಲಶಿಲೆ ಬ್ರಾಹ್ಮೀ ದುರ್ಗಾಪರಮೇಶ್ವರೀ, ಬೈಲೂರು ಮಹಿಷಮರ್ದಿನಿ, ಕನ್ನರ್ಪಾಡಿ ಶ್ರೀ ದುರ್ಗಾಪರಮೇಶ್ವರೀ, ದೊಡ್ಡಣಗುಡ್ಡೆ ಶ್ರೀ ಆದಿಶಕ್ತಿ, ಇಂದ್ರಾಣಿ ಪಂಚದುರ್ಗೆ, ಕಾಪು ಮಾರಿಗುಡಿ, ಕುಂಜಾರು ದುರ್ಗಾದೇವಿ ಸಹಿತ ಇತರ ದೇವಸ್ಥಾನಗಳಲ್ಲಿ ಕರೋನದ ಅಂಗವಾಗಿ ನವರಾತ್ರಿ ಉತ್ಸವ ಸರಳವಾಗಿ ನಡೆಯಲಿದೆ.

ಅತ್ಯಂತ ವೈಭವದಿಂದ ನಡೆಯುವ ಮಂಗಳೂರು ದಸರಾ ಉತ್ಸವಕ್ಕೆ ಈ ಬಾರಿಯೂ ಕೊರೋನಾ ಕರಿನೆರಳು ಕಾದಿದ್ದು, ಕೋವಿಡ್‌ ಆತಂಕ ಹಿನ್ನೆಲೆಯಲ್ಲಿ ನವರಾತ್ರಿ, ದಸರಾ ಆಚರಣೆಯನ್ನು ಸರಳವಾಗಿ ಆಚರಿಸುವ ಬಗ್ಗೆ ಉಡುಪಿ, ದ.ಕ. ಜಿಲ್ಲಾಡಳಿತ ಈಗಾಗಲೇ ಮಾರ್ಗಸೂಚಿ ಹೊರಡಿಸಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು ಶೇ. 50 ಜನರಿಗೆ ಮಿತಿಗೊಳಿಸಿ ನಡೆಸಬೇಕು. ಭಕ್ತರು ಕಡ್ಡಾಯವಾಗಿ ಎರಡು ಡೋಸ್‌ ಲಸಿಕೆ ಪಡೆದಿರುವ ಬಗ್ಗೆ ಪ್ರಮಾಣಪತ್ರ ಇದ್ದರೆ ಮಾತ್ರ ಪ್ರವೇಶಕ್ಕೆ ಅನುಮತಿ ನೀಡಬೇಕು. ಭಕ್ತರು ಲಸಿಕೆ ಪಡೆಯದಿದ್ದಲ್ಲಿ ಅಂಥವರಿಗೆ ದೇವಾಲಯದ ಆವರಣದಲ್ಲಿ ಲಸಿಕಾ ಕೇಂದ್ರ ತೆರೆಯಬೇಕು.ಮಾಸ್ಕ್ ಧರಿಸದೆ ಸೇರುವ ಸಾರ್ವಜನಿಕರ ವಿರುದ್ಧ ನಿಯಮಾನುಸಾರ ದಂಡ ವಿಧಿಸಲು ಕ್ರಮ ಕೈಗೊಳ್ಳಬೇಕು ಎಂದು ಉಭಯ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

- Advertisement -

Latest News

error: Content is protected !!