Saturday, June 6, 2026
Homeಕರಾವಳಿಸುಳ್ಯ; ಬೆಳ್ಳಾರೆಯ ಯುವ ಉದ್ಯಮಿ, ಕಾಮಧೇನು ಜ್ಯುವೆಲ್ಲರ್ಸ್ ಮಾಲೀಕ ನವೀನ್ ಅಪಹರಣ

ಸುಳ್ಯ; ಬೆಳ್ಳಾರೆಯ ಯುವ ಉದ್ಯಮಿ, ಕಾಮಧೇನು ಜ್ಯುವೆಲ್ಲರ್ಸ್ ಮಾಲೀಕ ನವೀನ್ ಅಪಹರಣ

- Advertisement -
- Advertisement -

ಸುಳ್ಯ: ಬೆಳ್ಳಾರೆಯ ಕಾಮಧೇನು ಜ್ಯುವೆಲ್ಲರ್ಸ್ ಮಾಲೀಕ ನವೀನ್ ಅವರನ್ನು ಅಪರಿಚಿತ ತಂಡವೊಂದು ಬಂದು ಬಲವಂತವಾಗಿ ಆಂಬ್ಯುಲೆನ್ಸ್ ನಲ್ಲಿ ಅಪಹರಿಸಲಾಗಿದ್ದು, ಖಚಿತ ಮಾಹಿತಿ ಮೇರೆಗೆ ಸುಂಟಿಕೊಪ್ಪದಲ್ಲಿ ಅಪಹರಣಕಾರರನ್ನು ತಡೆಯೊಡ್ಡಲಾಗಿದೆ. ಇನ್ನು ಮನೆಗೆ ಬಂದ ತಂಡವೊಂದು ಮನೆಯಲ್ಲಿದ್ದ ನವೀನ್ ಅವರನ್ನು ಬಲವಂತವಾಗಿ ಕೊಂಡೊಯ್ದಿದ್ದು, ಈ ವೇಳೆ ತಡೆಯಲು ಬಂದ ಅವರ ತಾಯಿಯ ಮೇಲೆ ಹಲ್ಲೆ ನಡೆಸಿತ್ತು ಎನ್ನಲಾಗಿದೆ.

ಇತ್ತ  ನವೀನ್ ಅವರನ್ನು ಆಂಬ್ಯುಲೆನ್ಸ್ ನಲ್ಲಿ‌ ಅಪಹರಿಸಲಾಗಿದೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಸುಳ್ಯದ ಶಿವ ಆಂಬ್ಯುಲೆನ್ಸ್ ನವರು ತಮ್ಮ ಗ್ರೂಪ್ ಗಳಿಗೆ ಮಾಹಿತಿ ರವಾನಿಸಿದ ಹಿನ್ನೆಲೆಯಲ್ಲಿ ಸುಂಟಿಕೊಪ್ಪ ಬಳಿ ಅಲ್ಲಿಯ ಆಂಬ್ಯುಲೆನ್ಸ್ ನವರು ಬೆಳ್ಳಾರೆಯಿಂದ ಹೋದ ಆಂಬ್ಯುಲೆನ್ಸ್ ನ್ನು ತಡೆದು ಅದರಲ್ಲಿದ್ದ ನವೀನ್ ಮತ್ತು ಇತರರನ್ನು ಸುಂಟಿಕೊಪ್ಪ ಪೊಲೀಸರಿಗೆ ಒಪ್ಪಿಸಿರುವುದಾಗಿ ಮಾಹಿತಿ ಲಭ್ಯವಾಗಿದೆ

- Advertisement -

Latest News

error: Content is protected !!