Saturday, June 6, 2026
Homeಕರಾವಳಿಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯ ನಾಯಕತ್ವ ನವಾಝ್ ಶರೀಫ್ ಕಟ್ಟೆ ಹೆಗಲಿಗೆ

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯ ನಾಯಕತ್ವ ನವಾಝ್ ಶರೀಫ್ ಕಟ್ಟೆ ಹೆಗಲಿಗೆ

- Advertisement -
- Advertisement -

ಬೆಳ್ತಂಗಡಿ: ಮುಂಬರುವ ಬೆಳ್ತಂಗಡಿ ವಿಧಾನಸಭಾ ಚುನಾವಣೆ ಪೂರ್ವ ತಯಾರಿ ಬಗ್ಗೆ ಪಕ್ಷದ ಕಛೇರಿಯಲ್ಲಿ ಇಂದು ಸಭೆ ನಡೆಸಲಾಯಿತು. ಪ್ರತಿ ಬೂತ್ ಸಮಿತಿ ಮಟ್ಟದಲ್ಲಿ ಪಕ್ಷದ ಸದಸ್ಯತ್ವ ಅಭಿಯಾನ ಮತ್ತು ಚುನಾವಣೆಯಲ್ಲಿ ಎಸ್‌ಡಿಪಿಐ ಪಕ್ಷದ ಅಭ್ಯರ್ಥಿ ಗೆಲುವಿಗೆ ಕಾರ್ಯಾಚಟುವಟಿಕೆ ಬಗ್ಗೆ ಚರ್ಚೆ ನಡೆಸಲಾಯಿತು. ಜಿಲ್ಲಾ ನಾಯಕರ  ಸಮ್ಮುಖದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ನೂತನ ಅಧ್ಯಕ್ಷರಾಗಿ ನವಾಝ್ ಶರೀಫ್ ಕಟ್ಟೆ ಇವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕ್ಷೇತ್ರ ಸಮಿತಿಯ ನಿಕಟಪೂರ್ವ ಅಧ್ಯಕ್ಷರಾದ ನಿಸಾರ್ ಕುದ್ರಡ್ಕ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸದಾತ್ ಬಜತ್ತೂರ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಜಮಾಲ್ ಜೋಕಟ್ಟೆ, ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ, ಅಸೆಂಬ್ಲಿ ಸಮಿತಿ , ಬ್ಲಾಕ್ ಸಮಿತಿ ಹಾಗೂ ಗ್ರಾಮ ಸಮಿತಿ ನಾಯಕರು ಉಪಸ್ಥಿತರಿದ್ದರು. ಕಾರ್ಯದರ್ಶಿ ನಿಝಾಮ್ ಗೇರುಕಟ್ಟೆ ಸ್ವಾಗತಿಸಿ, ಅಶ್ರಪ್ ಕಟ್ಟೆ ವಂದಿಸಿದರು.

- Advertisement -

Latest News

error: Content is protected !!