Wednesday, April 16, 2025
Homeಕರಾವಳಿಮಂಗಳೂರುಬೆಳ್ತಂಗಡಿ : ನಕ್ಸಲ್ ಬಿ.ಜಿ.ಕೃಷ್ಣಮೂರ್ತಿ ಮತ್ತು ಸಾವಿತ್ರಿ ಕಸ್ಟಡಿ ಅಂತ್ಯ; ವಾಪಸ್ ಕೇರಳ ಜೈಲಿಗೆ ಕಳುಹಿಸಿದ...

ಬೆಳ್ತಂಗಡಿ : ನಕ್ಸಲ್ ಬಿ.ಜಿ.ಕೃಷ್ಣಮೂರ್ತಿ ಮತ್ತು ಸಾವಿತ್ರಿ ಕಸ್ಟಡಿ ಅಂತ್ಯ; ವಾಪಸ್ ಕೇರಳ ಜೈಲಿಗೆ ಕಳುಹಿಸಿದ ನ್ಯಾಯಾಲಯ

spot_img
- Advertisement -
- Advertisement -

ಬೆಳ್ತಂಗಡಿ : ಮೂರು ನಕ್ಸಲ್ ಚಟುವಟಿಕೆ ಪ್ರಕರಣ ದಾಖಲಾದ  ಸಂಬಂಧ ಇಬ್ಬರು ನಕ್ಸಲ್ ನಾಯಕರನ್ನು ಬೆಳ್ತಂಗಡಿ ಪೊಲೀಸರು ಕೇರಳ ಜೈಲಿನಿಂದ ಬಾಡಿ ವಾರೆಂಟ್ ಮೂಲಕ ಬೆಳ್ತಂಗಡಿ ನ್ಯಾಯಾಲಯಕ್ಕೆ ಏ.7 ರಂದು ಹಾಜರುಪಡಿಸಿ ಏ.11 ರವರೆಗೆ ಕಸ್ಟಡಿಗೆ ಪಡೆಯಲಾಗಿತ್ತು‌. ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಮತ್ತೆ ಸಂಜೆ ಹೊತ್ತಿಗೆ ನ್ಯಾಯಾಲಯ ಕೇರಳ ಜೈಲಿಗೆ ಕಳುಹಿಸಿದೆ.

8-112021 ರಂದು ಕೇರಳ ರಾಜ್ಯದ ಪೊಲೀಸರು ಮೋಸ್ಟ್ ವಾಟೆಂಡ್ ನಕ್ಸಲ್ ನಾಯಕರಾದ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ನಿವಾಸಿ ನಕ್ಸಲ್ ಪಶ್ಚಿಮ ಘಟ್ಟದ ವಿಶೇಷ ಸಮಿತಿಯ ಕಾರ್ಯದರ್ಶಿಯಾಗಿದ್ದ ಬಿ.ಜಿ.ಕೃಷ್ಣಮೂರ್ತಿ(50) ಮತ್ತು ಚಿಕ್ಕಮಗಳೂರು ಜಿಲ್ಲೆಯ ಕಳಸ ನಿವಾಸಿ ಸಾವಿತ್ರಿ(36)ಯನ್ನು ಬಂಧಿಸಿ ತ್ರಿಶೂರ್ ಜೈಲಿನಡಿಲಾಗಿತ್ತು. ಕರ್ನಾಟಕ, ಕೇರಳ, ತಮಿಳುನಾಡಿನಲ್ಲಿ ಬಿ.ಜಿ.ಕೃಷ್ಣಮೂರ್ತಿ ವಿರುದ್ಧ 53 ಪ್ರಕರಣ, ಸಾವಿತ್ರಿ ವಿರುದ್ಧ 22 ಪ್ರಕರಣ ತನಿಖೆಯಲ್ಲಿದೆ.

2012-2013 ರಲ್ಲಿ ನಡೆದ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಮಚಂದ್ರ ಭಟ್ ಮನೆಯ ಅಂಗಳದಲ್ಲಿದ್ದ ಕಾರು, ಬೈಕ್ ಗೆ ಬೆಂಕಿ ಹಚ್ಚಿದ ಪ್ರಕರಣ,ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಕಾರ್ಯತಡ್ಕ  ಗ್ರಾಮದಲ್ಲಿ ನಕ್ಸಲ್ ಬೆಂಬಲಿತ ಬ್ಯಾನರ್ ಹಾಕಿದ ಪ್ರಕರಣ,ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮಲವಂತಿಗೆ ಗ್ರಾಮದಲ್ಲಿ ಭಾರಿ ಸ್ಪೋಟಕ ಪತ್ತೆ ಪ್ರಕರಣದಲ್ಲಿ ಇಬ್ಬರನ್ನು ಬಾಡಿ ವಾರೆಂಟ್ ಮೂಲಕ ಕೇರಳ ರಾಜ್ಯದ ತ್ರಿಶೂರ್ ಜೈಲಿನಿಂದ ಏ.7 ರಂದು ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಿ ತನಿಖೆ ನಡೆಸಿದ್ದರು. ಏ.11 ರಂದು ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಏ.11 ರಂದು ಬೆಳಗ್ಗೆ ಬೆಳ್ತಂಗಡಿ ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ಮತ್ತು ಜೆಎಮ್ಎಫ್ಸಿ ನ್ಯಾಯಾಲಯದ ನ್ಯಾಯಾಧೀಶರಾದ ವಿಜಯೇಂದ್ರ.ಟಿ.ಎಸ್ ಮುಂದೆ ಹಾಜರುಪಡಿಸಿದ್ದು. ನ್ಯಾಯಾಲಯ ವಾಪಸ್ ಕೇರಳದ ತ್ರಿಶೂರ್ ಜೈಲಿಗೆ ಕಳುಹಿಸಲು ಆದೇಶ ಮಾಡಿದ್ದು ಅದರಂತೆ ಇಬ್ಬರು ನಕ್ಸಲರನ್ನು ಬೆಳ್ತಂಗಡಿ ಪೊಲೀಸರ ಬಿಗಿ ಭದ್ರತೆಯಲ್ಲಿ ಕೇರಳಕ್ಕೆ ಕರೆದೊಯ್ಯಲಾಗಿದೆ.

- Advertisement -
spot_img

Latest News

error: Content is protected !!