Thursday, June 4, 2026
Homeಕರಾವಳಿಉಡುಪಿಉಡುಪಿ: ಎಎನ್ಎಫ್ ಎನ್ ಕೌಂಟರ್ ಗೆ ನಕ್ಸಲ್ ನಾಯಕ ವಿಕ್ರಂ ಗೌಡ ಬಲಿ

ಉಡುಪಿ: ಎಎನ್ಎಫ್ ಎನ್ ಕೌಂಟರ್ ಗೆ ನಕ್ಸಲ್ ನಾಯಕ ವಿಕ್ರಂ ಗೌಡ ಬಲಿ

- Advertisement -
- Advertisement -

ಉಡುಪಿ: ಹೆಬ್ರಿ ಪೊಲೀಸ್ ಠಾಣೆ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ ಎಎನ್ಎಫ್ ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ.

ನಕ್ಸಲ್ ವಿರೋಧಿ ಕಾರ್ಯಾಚರಣೆ ವೇಳೆ ನೇತ್ರಾವತಿ ನಕ್ಸಲ್ ದಳದ ನಾಯಕ ವಿಕ್ರಮ್ ಗೌಡ ಎಎನ್ಎಫ್ ಎನ್ ಕೌಂಟರ್ ಗೆ ಬಲಿಯಾಗಿದ್ದಾನೆ ಎನ್ನಲಾಗಿದೆ

ಕಬ್ಬಿನಾಲೆಯ ಪೀತೆ ಬೈಲ್ ನಲ್ಲಿ ಅರಣ್ಯ ಪ್ರದೇಶದಲ್ಲಿ ಘಟನೆ ನಡೆದಿದ್ದು, ನಕ್ಸಲ್ ಚಲನವಲನಗಳ ಮಾಹಿತಿ ಹಿನ್ನೆಲೆಯಲ್ಲಿ ಎಎನ್ ಎಫ್ ಸಿಬ್ಬಂದಿ ಕೂಂಬಿಂಗ್ ನಡೆಸುತ್ತಿದ್ದ ವೇಳೆ ನಕ್ಸಲರು ಮುಖಾಮುಖಿಯಾಗಿದ್ದಾರೆ.

ಸುಮಾರು ಹದಿಮೂರು ವರ್ಷಗಳ ಬಳಿಕ ನಕ್ಸಲ್ ಎನ್ ಕೌಂಟರ್ ನಡೆದಿದ್ದು, ಕಾರ್ಯಾಚರಣೆ ವೇಳೆ ಮೂವರು ನಕ್ಸಲರು ಪರಾರಿಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಕೆಲವು ದಿನಗಳಿಂದ ಕಬ್ಬಿನಾಲೆ ಭಾಗದಲ್ಲಿ ನಕ್ಸಲ್ ಚಟುವಟಿಕೆ ಬಿರುಸುಗೊಂಡಿದ್ದ ಹಿನ್ನೆಲೆಯಲ್ಲಿ ಎಎನ್ ಎಫ್ ಕೂಂಬಿಂಗ್ ತೀವ್ರಗೊಳಿಸಲಾಗಿತ್ತು‌.

- Advertisement -

Latest News

error: Content is protected !!