Thursday, May 2, 2024
Homeಕರಾವಳಿಸುಬ್ರಹ್ಮಣ್ಯದ ಐನೆಕಿದು ಗ್ರಾಮದಲ್ಲಿ ನಕ್ಸಲರು ಪ್ರತ್ಯಕ್ಷ ಶಂಕೆ; ನಕ್ಸಲ್ ನಿಗ್ರಹ ದಳದಿಂದ ಕೂಂಬಿಂಗ್ ಕಾರ್ಯಾಚರಣೆ

ಸುಬ್ರಹ್ಮಣ್ಯದ ಐನೆಕಿದು ಗ್ರಾಮದಲ್ಲಿ ನಕ್ಸಲರು ಪ್ರತ್ಯಕ್ಷ ಶಂಕೆ; ನಕ್ಸಲ್ ನಿಗ್ರಹ ದಳದಿಂದ ಕೂಂಬಿಂಗ್ ಕಾರ್ಯಾಚರಣೆ

spot_img
- Advertisement -
- Advertisement -

ಸುಬ್ರಹ್ಮಣ್ಯದ ಐನೆಕಿದು ಗ್ರಾಮದಲ್ಲಿ ನಕ್ಸಲರು ಪ್ರತ್ಯಕ್ಷ ಶಂಕೆ ಹಿನ್ನೆಲೆ ನಕ್ಸಲ್ ನಿಗ್ರಹ ದಳದಿಂದ ಕೂಂಬಿಂಗ್ ಕಾರ್ಯಾಚರಣೆ ಆರಂಭವಾಗಿದೆ.

ಸುಹ್ಮಣ್ಯದ ಐನೆಕಿದು ಗ್ರಾಮದ ಕೋಟೆ ತೋಟದ ಮಜಲು ಎಂಬಲ್ಲಿಗೆ ಮಾ.23 ರ ಸಂಜೆ ಮೂರು ಮಂದಿ ಅಪರಿಚಿತರು ಬಂದು ಹೋಗಿದ್ದು , ನಕ್ಸಲರಿರಬಹುದೇ ಎಂಬ ಸಂದೇಹ ಮೂಡಿದೆ.

ಗ್ರಾಮದ ಅಶೋಕ್ ಎಂಬವರ ಮನೆಗೆ ಬಂದಿರುವುದಾಗಿ ತಿಳಿದು ಬಂದಿದ್ದು ಅಪರಿಚಿತರು ಸುಮಾರು ಒಂದು ಗಂಟೆಗಳ ಕಾಲ ಅಲ್ಲಿ ಇದ್ದು ಹಲವು ವಿಚಾರಗಳನ್ನು ವಿಚಾರಿಸಿರುವುದಾಗಿ ತಿಳಿದು ಬಂದಿದೆ. ಅಲ್ಲದೆ ಮೊಬೈಲ್ ಚಾರ್ಚ್ ಮಾಡಿಸಿ ತೆರಳಿದ್ಧಾರೆ ಎನ್ನಲಾಗಿದೆ.

ಶನಿವಾರ ಸಂಜೆ 6 ಗಂಟೆ ಸುಮಾರಿಗೆ ಸಣ್ಣದಾಗಿ ಮಳೆಯಾಗುತ್ತಿದ್ದ ಸಂದರ್ಭ ದಲ್ಲಿ ಶಂಕಿತರ ತಂಡ ಐನೆಕಿದು ಗ್ರಾಮದ ಅರಣ್ಯದಂಚಿನ ತೋಟದ ಮೂಲಕ ಆಗಮಿಸಿತ್ತು. ತೋಟದಲ್ಲಿದ್ದ ಕೆಲಸದವರ ಶೆಡ್‌ಗೆ ಭೇಟಿ ನೀಡಿದ ವೇಳೆ ಕೆಲಸದಾಳು ಶೆಡ್‌ನ‌ ಬಾಗಿಲು ಹಾಕಿದ್ದು, ಬಳಿಕ ಶಂಕಿತರ ತಂಡ ಅಲ್ಲೇ ಪಕ್ಕದಲ್ಲಿರುವ ತೋಟದ ಮಾಲೀಕರ ಮನೆಗೆ ತೆರಳಿ ಒಳ ಹೊಕ್ಕಿತ್ತು. ಮನೆಯವರ ಜತೆ ಸುಮಾರು ಒಂದು ತಾಸಿಗೂ ಅಧಿಕ ಕಾಲ ಮಾತುಕತೆ ನಡೆಸಿತ್ತು.

ನಕ್ಸಲ್ ನಿಗ್ರಹ ದಳದವರು ಇದೆ ಪ್ರದೇಶದಲ್ಲಿ ಕೂಂಬಿಂಗ್ ನಡೆಸುತ್ತಿದ್ದಾರೆ.ಕೆಲವು ದಿನಗಳ ಹಿಂದಷ್ಠೇ ಕೂಜಿಮಲೆ ಪ್ರದೇಶದಲ್ಲಿ‌ ನಕ್ಸಲರ ಚಟುವಟಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಇವರು ಕೂಡಾ ನಕ್ಸಲರೇ ಆಗಿರಬಹುದು ಎಂದು ಅಂದಾಜಿಸಲಾಗಿದ್ದು ಬಂದವರು ಶಸ್ತ್ರಾಸ್ತ್ರ ಹೊಂದಿದ್ದರು ಎನ್ನಲಾಗುತ್ತಿದೆ.ಇದೀಗ ಸುದ್ದಿ ಹರಡುತ್ತಿದ್ದಂತೆ ನಕ್ಸಲ್ ನಿಗ್ರಹ ದಳ ಆಗಮಿಸಿ  ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಿದ್ದಾರೆ.: ಕಾರ್ಕಳ ಎಎನ್ಎಫ್ ಕ್ಯಾಂಪ್ ನವರಿಂದ ಕೂಂಬಿಂಗ್ ಕಾರ್ಯಾಚರಣೆ ನಡೆಯುತ್ತಿದೆ.

- Advertisement -
spot_img

Latest News

error: Content is protected !!