Thursday, June 25, 2026
Homeತಾಜಾ ಸುದ್ದಿಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು

- Advertisement -
- Advertisement -

ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಅವರು ಇಂದು (ಫೆಬ್ರವರಿ 9) ಗಂಟಲು ಸೋಂಕು, ನಿರಂತರ ಕೆಮ್ಮು ಮತ್ತು ಉಸಿರಾಟದ ತೊಂದರೆಯಿಂದ ಪುಣೆಯ ಖಾಸಗಿ ಆಸ್ಪತ್ರೆ ರೂಬಿ ಹಾಲ್ ಕ್ಲಿನಿಕ್‌ ಗೆ ದಾಖಲಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ 85 ವರ್ಷದ ಹಿರಿಯ ನಾಯಕ ಶರದ್ ಪವಾರ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಅವರನ್ನು ಬಾರಾಮತಿಯಿಂದ ಪುಣೆಯ ರೂಬಿ ಹಾಲ್ ಕ್ಲಿನಿಕ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಅವರ ಆರೋಗ್ಯದ ಮೇಲೆ ವೈದ್ಯರ ತಂಡವು ತೀವ್ರ ನಿಗಾ ಇರಿಸಿದ್ದು, ಸದ್ಯ ಅವರಿಗೆ ಚಿಕಿತ್ಸೆ ಮುಂದುವರಿದಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.

ಆಸ್ಪತ್ರೆಗೆ ದಾಖಲಿಸುವ ಸಮಯದಲ್ಲಿ ಅವರ ಪುತ್ರಿ ಸುಪ್ರಿಯಾ ಸುಳೆ, ಪತ್ನಿ ಪ್ರತಿಭಾ ಪವಾರ್ ಮತ್ತು ಅಳಿಯ ಸದಾನಂದ ಸುಳೆ ಅವರು ಜೊತೆಗಿದ್ದರು ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!