Wednesday, June 3, 2026
Homeತಾಜಾ ಸುದ್ದಿರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ: ನಾಮಿನೇಷನ್ ವೇಳೆ ಮುಖ್ಯಮಂತ್ರಿ...

ರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ: ನಾಮಿನೇಷನ್ ವೇಳೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕೂಡಾ ಉಪಸ್ಥಿತಿ

- Advertisement -
- Advertisement -

ನವದೆಹಲಿ: ಜುಲೈ ಹದಿನೆಂಟರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಶ್ರೀಮತಿ ದ್ರೌಪದಿ ಮುರ್ಮು ಇಂದು ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆ ವೇಳೆ ಪ್ರಧಾನಿ, ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಆಡಳಿತ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಎನ್‌ಡಿಎ ಮೈತ್ರಿಕೂಟದ ಪ್ರಮುಖರು ಉಪಸ್ಥಿತರಿದ್ದರು. ಕರ್ನಾಟಕದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕೂಡಾ ನಾಮಪತ್ರ ಸಲ್ಲಿಕೆ ವೇಳೆ ಉಪಸ್ಥಿತರಿದ್ದರು.

ದ್ರೌಪದಿ ಮುರ್ಮು ಅವರ ನಾಮಪತ್ರಕ್ಕೆ ಸೂಚಕರಾಗಿ ರಾಜ್ಯದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಚಿವ ಶ್ರೀರಾಮುಲು ಸಹಿ ಹಾಕಿದ್ದಾರೆ.

- Advertisement -

Latest News

error: Content is protected !!