Sunday, June 7, 2026
Homeತಾಜಾ ಸುದ್ದಿದೇವಸ್ಥಾನದಲ್ಲಿ ಕಸ ಗುಡಿಸಿದ ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು: ನೆಟ್ಟಿಗರ ಮನಗೆದ್ದ ಬುಡಕಟ್ಟು ಮಹಿಳೆ

ದೇವಸ್ಥಾನದಲ್ಲಿ ಕಸ ಗುಡಿಸಿದ ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು: ನೆಟ್ಟಿಗರ ಮನಗೆದ್ದ ಬುಡಕಟ್ಟು ಮಹಿಳೆ

- Advertisement -
- Advertisement -

ಬಿಜೆಪಿ ನೇತೃತ್ವದ ಎನ್‌ಡಿಎ ಮುಂಬರುವ ಚುನಾವಣೆಗೆ ರಾಷ್ಟ್ರಪತಿ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅವರು ಆಯ್ಕೆಯಾಗಿದ್ದಾರೆ. ಬುಡಕಟ್ಟು ಸಮುದಾಯಕ್ಕೆ ಸೇರಿದ ಜಾರ್ಖಂಡ್‌ನ ಮಾಜಿ ರಾಜ್ಯಪಾಲೆ ದ್ರೌಪದಿ ಮುರ್ಮು ಅವರು ಶಿವನ ದೇವಸ್ಥಾನದ ನೆಲ ಗುಡಿಸುತ್ತಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಇದೀಗ ವೈರಲ್ ಆಗಿದೆ.

ದೌಪದಿ ಮುರ್ಮು ಅವರು ತಮ್ಮ ತವರು ರಾಜ್ಯವಾದ ಒಡಿಶಾದ ಮಯೂರ್‌ಭಂಜ್ ಜಿಲ್ಲೆಯ ರಾಯರಂಗ್‌ಪುರದಲ್ಲಿರುವ ಶಿವನ ದೇವಾಲಯಕ್ಕೆ ಇಂದು ಭೇಟಿ ಕೊಟ್ಟಿದ್ದಾರೆ. ಈ ವೇಳೆ ದೇವರಿಗೆ ಪ್ರಾರ್ಥನೆ ಸಲ್ಲಿಸುವ ಮೊದಲು ದೇವಾಲಯದ ನೆಲವನ್ನು ಗುಡಿಸಿದ್ದಾರೆ. ಪ್ರಸ್ತುತ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಈ ವಿಡಿಯೋ ನೆಟ್ಟಿಗರ ಮನಗೆದ್ದಿದೆ.

- Advertisement -

Latest News

error: Content is protected !!