Wednesday, May 15, 2024
Homeತಾಜಾ ಸುದ್ದಿಕೇಂದ್ರ ಸರ್ಕಾರದಿಂದ ಮಹತ್ವದ ಹೆಜ್ಜೆ: ದೇಶದ ಪ್ರಜೆಗಳಿಗೆ ಸಿಗಲಿದೆ 'ಆರೋಗ್ಯ ಐಡಿ ಕಾರ್ಡ್‌'

ಕೇಂದ್ರ ಸರ್ಕಾರದಿಂದ ಮಹತ್ವದ ಹೆಜ್ಜೆ: ದೇಶದ ಪ್ರಜೆಗಳಿಗೆ ಸಿಗಲಿದೆ ‘ಆರೋಗ್ಯ ಐಡಿ ಕಾರ್ಡ್‌’

spot_img
- Advertisement -
- Advertisement -

ನವದೆಹಲಿ: ರಾಷ್ಟ್ರೀಯ ಡಿಜಿಟಲ್‌ ಹೆಲ್ತ್‌ ಮಿಷನ್‌(ಎನ್‌ಡಿಎಚ್‌ಎಂ) ಅಡಿಯಲ್ಲಿ ದೇಶದ ಪ್ರತಿಯೊಬ್ಬ ಪ್ರಜೆಗೆ ಆರೋಗ್ಯ ಐಡಿ ಕಾರ್ಡ್ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ‌ಈ ಯೋಜನೆಯಲ್ಲಿ ಆಸ್ಪತ್ರೆಗೆ ಅಡ್ಮಿಟ್‌ ಆಗಿರುವ ರೋಗಿಗೆ ಈ ಹಿಂದೆ ಎಲ್ಲಿ ಚಿಕಿತ್ಸೆ ನೀಡಲಾಗಿತ್ತು? ಏನು ಚಿಕಿತ್ಸೆ ನೀಡಲಾಗಿತ್ತು? ಆ ಸಮಯದಲ್ಲಿ ರೋಗಿಯ ಆರೋಗ್ಯ ಹೇಗಿತ್ತು? ಯಾವ ಕಾರಣಕ್ಕೆ ಏನು ಪರೀಕ್ಷೆ ಮಾಡಿಸಲಾಗಿತ್ತು ಎಲ್ಲವೂ ಒಂದೇ ಕ್ಲಿಕ್‌ ನಲ್ಲಿ ಸಿಗಲಿದೆ.

ಆಗಸ್ಟ್ 15 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದ್ದು, ಈ ಐಡಿ ಕಾರ್ಡ್‌ ಎಲ್ಲರಿಗೂ ಕಡ್ಡಾಯವಲ್ಲ. ಜನರು ಸ್ವಇಚ್ಛೆಯಿಂದ ಕಾರ್ಡ್‌ ಮಾಡಿಸಬಹುದು. ಆರಂಭದಲ್ಲಿ ಹೆಲ್ತ್‌ ಐಡಿ, ವೈಯಕ್ತಿಕ ಆರೋಗ್ಯ ಮಾಹಿತಿ, ಡಿಜಿ ಡಾಕ್ಟರ್‌ ಮತ್ತು ಹೆಲ್ತ್‌ ರಿಜಿಸ್ಟ್ರಿ ಇರಲಿದೆ. ನಂತರದ ದಿನಗಳಲ್ಲಿ ಇ ಫಾರ್ಮಾಸಿ ಮತ್ತು ಟೆಲಿಮೆಡಿಸಿನ್‌ ಸೇವೆಗಳನ್ನು ಸೇರಿಸಲಾಗುತ್ತದೆ. ಈಗಾಗಲೇ ಹಲವು ದೇಶಗಳಲ್ಲಿ ಸರ್ಕಾರವೇ ಈ ರೀತಿಯ ಆರೋಗ್ಯ ಕಾರ್ಡ್‌ಗಳನ್ನು ನೀಡಿವೆ.

ಕಾರ್ಡ್ ನಿಂದ ಏನು ಲಾಭ ?
ಈ ಸೇವೆ ದೇಶವ್ಯಾಪಿ ಇರಲಿದೆ. ವ್ಯಕ್ತಿ ಯಾವುದೇ ಮೂಲೆಗೆ ಹೋದಾಗ ಸಮಸ್ಯೆಯಾಗಿ ಆಸ್ಪತ್ರೆ ಸೇರಿದಾಗ ಆತನ ಆರೋಗ್ಯದ ಮಾಹಿತಿ ಕೂಡಲೇ ಸಿಗುವುದಿಲ್ಲ. ಆದರೆ ಈ ಆಪ್‌ನಲ್ಲಿ ವಿವರ ನೀಡಿದ್ದರೆ ಕೂಡಲೇ ವೈದ್ಯರಿಗೆ ಈ ಹಿಂದೆ ರೋಗಿಗೆ ಏನಾಗಿತ್ತು? ಯಾವ ಕಾರಣಕ್ಕೆ ಶಸ್ತ್ರ ಚಿಕಿತ್ಸೆ ನೀಡಲಾಗಿತ್ತು? ಈ ಹಿಂದೆ ಎಲ್ಲಿ ಚಿಕಿತ್ಸೆ ನೀಡಲಾಗಿತ್ತು ಈ ಎಲ್ಲ ವಿವರಗಳು ಕೂಡಲೇ ಸಿಗಲಿದೆ. ಇದರಿಂದಾಗಿ ಕಡಿಮೆ ಅವಧಿಯಲ್ಲಿ ರೋಗಿಗೆ ಚಿಕಿತ್ಸೆ ನೀಡಲು ಸಾಧ್ಯವಾಗುತ್ತದೆ.

- Advertisement -
spot_img

Latest News

error: Content is protected !!