Friday, May 3, 2024
Homeಕರಾವಳಿಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನೀರು ಬಂಡಿ ಉತ್ಸವ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನೀರು ಬಂಡಿ ಉತ್ಸವ

spot_img
- Advertisement -
- Advertisement -

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಕೊನೆಯ ಉತ್ಸವವಾಗಿ ರಾತ್ರಿ ನೀರಿನಲ್ಲಿ ಶ್ರೀ ದೇವರ ಬಂಡಿ ಉತ್ಸವ ನೆರವೇರಿತು.

ದೇವಸ್ಥಾನದ ಹೊರಾಂಗಣದ ಸುತ್ತಲೂ ನೀರನ್ನು ಬೆಳಗ್ಗೆಯಿಂದಲೇ ತುಂಬಿಸಲಾಗಿತ್ತು. ರಾತ್ರಿ ಮಹಾಪೂಜೆಯ ಬಳಿಕ ಪಾಲಕಿ ಉತ್ಸವ ನೀರಿನಲ್ಲಿ ನೆರವೇರಿತು. ಬಳಿಕ ನೀರಿನಲ್ಲಿ ಶ್ರೀ ದೇವರ ಶೇಷವಾಹನಯುಕ್ತ ಬಂಡಿ ರಥೋತ್ಸವ ನಡೆಯಿತು. ಈ ಉತ್ಸವದೊಂದಿಗೆ ಚಂಪಾಷಷ್ಠಿ ಉತ್ಸವಗಳು ಮುಕ್ತಾಯವಾದವು. ಮಹಾ ಸಂಪ್ರೋಕ್ಷಣ ಹೋಮವು ನೆರವೇರಿತು.

ದೇವಸ್ಥಾನದ ಆನೆ ಯಶಸ್ವಿಯು ನೀರಿನಲ್ಲಿ ಹೊರಳಾಡಿ ಸಂತೋಷ ಪಡುವುದರೊಂದಿಗೆ, ತನಗೆ ನೀರು ಹಾರಿಸಿದ ಪುಟಾಣಿ ಮಕ್ಕಳ ಮೇಲೆ ತನ್ನ ಕಾಲು ಹಾಗೂ ಸೊಂಡಿಲಿನಿಂದ ನೀರು ಎರಚಿ ನೀರಾಟವಾಡಿ ಸಂಭ್ರಮಿಸಿತು.
ಜಾತ್ರೆಯ ಅವಧಿಯಲ್ಲಿ ದೇವಸ್ಥಾನದ ವಿಶೇಷ ಸೇವೆಗಳಲ್ಲಿ ಒಂದಾದ ಸರ್ಪಸಂಸ್ಕಾರ ನಡೆಯುವುದಿಲ್ಲ. ಸೋಮವಾರ ಜಾತ್ರೆ ಮುಕ್ತಾಯವಾಗಿರುವುದರಿಂದ ಡಿ. 6ರಿಂದ ಸರ್ಪಸಂಸ್ಕಾರ ಸೇವೆ ಪುನರಾರಂಭಗೊಳ್ಳಲಿದೆ.ಇನ್ನು ಡಿ. 28ರಂದು ಕಿರುಷಷ್ಠಿ ದೇವಸ್ಥಾನದಲ್ಲಿ ಕಿರುಷಷ್ಠಿ ರಥೋತ್ಸವವು ಡಿ. 28ರಂದು ಸಂಜೆ ನೆರವೇರಲಿದೆ.

- Advertisement -
spot_img

Latest News

error: Content is protected !!