Tuesday, April 30, 2024
Homeಕರಾವಳಿಉಡುಪಿಸೆ.12ಕ್ಕೆ ನೀಟ್ ಪರೀಕ್ಷೆ: ನಾಳೆಯಿಂದಲೇ ಅರ್ಜಿ ಸಲ್ಲಿಕೆಗೆ ಅವಕಾಶ

ಸೆ.12ಕ್ಕೆ ನೀಟ್ ಪರೀಕ್ಷೆ: ನಾಳೆಯಿಂದಲೇ ಅರ್ಜಿ ಸಲ್ಲಿಕೆಗೆ ಅವಕಾಶ

spot_img
- Advertisement -
- Advertisement -

ದೆಹಲಿ: 2021ರ ನೀಟ್ ಪರೀಕ್ಷೆಗೆ ದಿನಾಂಕ ಘೋಷಣೆಯಾಗಿದೆ. ದೇಶಾದ್ಯಂತ ಸೆಪ್ಟೆಂಬರ್ 12 ರಂದು ನೀಟ್ ಪರೀಕ್ಷೆ ನಡೆಸಲಾಗುವುದು ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಟ್ವಿಟರ್ ನಲ್ಲಿ ಪ್ರಕಟಿಸಿದ್ದಾರೆ. ಜುಲೈ 13ರ ಸಂಜೆ 5 ಗಂಟೆಯಿಂದಲೇ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಧರ್ಮೇಂದ್ರ ಪ್ರಧಾನ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

ಕೋವಿಡ್ ಸೋಂಕು ಕಾರಣದಿಂದ ದೇಶಾದ್ಯಂತ ನಡೆಯುವ ನೀಟ್ ಪರೀಕ್ಷಾ ಕೇಂದ್ರಗಳನ್ನು ಹೆಚ್ಚಿಸಲಾಗುವುದು ಎಂದು ಪ್ರಧಾನ್ ಮಾಹಿತಿ ನೀಡಿದ್ದಾರೆ ಈ‌ ಹಿಂದೆ 155 ನಗರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಅದನ್ನು 198 ನಗರಗಳಿಗೆ ಹೆಚ್ಚಿಸಲಾಗುವುದು.‌ ಅಲ್ಲದೇ ಪರೀಕ್ಷಾ ಕೇಂದ್ರಗಳನ್ನು 3,862ಕ್ಕೆ ಹೆಚ್ಚಿಸಲಾಗುವುದು ಎಂದು ಕೂಡಾ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

ಪರೀಕ್ಷಾ ಕೇಂದ್ರಗಳಿಗೆ ಆಗಮಿಸುವ ವಿದ್ಯಾರ್ಥಿಗಳಿಗೆ ಫೇಸ್​ ಮಾಸ್ಕ್ ಒದಗಿಸಲಾಗುತ್ತದೆ. ಜೊತೆಗೆ ಕೋವಿಡ್ ಮಾರ್ಗಸೂಚಿಗಳ ಅನ್ವಯ ಪರೀಕ್ಷೆ ನಡೆಯಲಿದೆ.

- Advertisement -
spot_img

Latest News

error: Content is protected !!