Friday, July 24, 2026
HomeWorldನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ: 26 ದಿನಗಳ ಬಳಿಕ ಉಪವಾಸ ಸತ್ಯಾಗ್ರಹ ಹಿಂಪಡೆದ ಸೋನಮ್‌ ವಾಂಗ್ಚುಕ್‌

ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ: 26 ದಿನಗಳ ಬಳಿಕ ಉಪವಾಸ ಸತ್ಯಾಗ್ರಹ ಹಿಂಪಡೆದ ಸೋನಮ್‌ ವಾಂಗ್ಚುಕ್‌

- Advertisement -
- Advertisement -

ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿನ ಅವ್ಯವಹಾರಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅವರ ರಾಜೀನಾಮೆಗೆ ಆಗ್ರಹಿಸಿ ಜೂನ್‌ 28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದ ಪ್ರಸಿದ್ಧ ಸಾಮಾಜಿಕ ಹೋರಾಟಗಾರ ಸೋನಮ್‌ ವಾಂಗ್ಚುಕ್‌, ಬರೋಬ್ಬರಿ 26 ದಿನಗಳ ನಂತರ ಜುಲೈ 23ರ ರಾತ್ರಿ ತಮ್ಮ ಹೋರಾಟವನ್ನು ಅಂತ್ಯಗೊಳಿಸಿದ್ದಾರೆ.

ಹರಿಯಾಣದ ಗುರುಗ್ರಾಮ್‌ನಲ್ಲಿರುವ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಾಂಗ್ಚುಕ್‌, ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ, ಡಾ. ಜಿತೇಂದ್ರ ಸಿಂಗ್‌, ಲಡಾಖ್‌ನ ಅಪೆಕ್ಸ್‌ ಬಾಡಿ ಹಿರಿಯ ನಾಯಕರು ಹಾಗೂ ತಮ್ಮ ಪತ್ನಿ ಗೀತಾಂಜಲಿ ಅವರ ಸಮ್ಮುಖದಲ್ಲಿ ಸರ್ಕಾರ ನಡೆಸಿದ ದೀರ್ಘ ಮಾತುಕತೆಯ ಬಳಿಕ ಈ ನಿರ್ಧಾರಕ್ಕೆ ಬಂದಿದ್ದಾರೆ.

ವಿವಿಧ ರಾಜಕೀಯ ಪಕ್ಷಗಳ 65 ಸಂಸದರು ಉಪವಾಸ ಅಂತ್ಯಗೊಳಿಸುವಂತೆ ಬರೆದಿದ್ದ ಮನವಿ ಪತ್ರ ಹಾಗೂ ದೇಶದಲ್ಲಿ ಸಂಭವಿಸಬಹುದಾದ ಸಂಭಾವ್ಯ ಹಿಂಸಾಚಾರದ ಕಳವಳದಿಂದ ಹೋರಾಟ ಹಿಂಪಡೆದಿರುವುದಾಗಿ ಅವರು ತಮ್ಮ ‘X’ ಖಾತೆಯಲ್ಲಿ ತಿಳಿಸಿದ್ದಾರೆ. ಅಲ್ಲದೆ, ಈ ಕುರಿತು ಶೀಘ್ರದಲ್ಲೇ ವಿಡಿಯೋ ಮೂಲಕ ವಿವರಣೆ ನೀಡುವುದಾಗಿ ಹೇಳಿರುವ ಅವರು, ಬೆಂಬಲಿಗರು ಎಲ್ಲಿಯೂ ಹಿಂಸಾಚಾರಕ್ಕೆ ಆಸ್ಪದ ನೀಡದೆ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.

- Advertisement -

Latest News

error: Content is protected !!