- Advertisement -
![]()
- Advertisement -
ನೀಟ್-ಯುಜಿ (NEET-UG) 2026ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದ್ದು, ಮಹಾರಾಷ್ಟ್ರದ ನಾಸಿಕ್‌ನಲ್ಲಿ ದೊಡ್ಡ ಮಟ್ಟದ ಪ್ರಗತಿ ಕಂಡುಬಂದಿದೆ.
ರಾಜಸ್ಥಾನ ಪೊಲೀಸರು ನೀಡಿದ ಖಚಿತ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ನಾಸಿಕ್ ನಗರ ಅಪರಾಧ ವಿಭಾಗದ ಪೊಲೀಸರು, ಶುಭಂ ಖೈರ್ನಾರ್ ಎಂಬ ಯುವಕನನ್ನು ಬಂಧಿಸಿದ್ದಾರೆ.
ಈ ಹಗರಣದ ಜಾಲವು ಕೇವಲ ಒಬ್ಬ ವ್ಯಕ್ತಿಗೆ ಸೀಮಿತವಾಗಿರದೆ ಅಂತರರಾಜ್ಯ ಮಟ್ಟದಲ್ಲಿ ಹರಡಿಕೊಂಡಿದ್ದು, ಈವರೆಗೆ ಐದು ವಿವಿಧ ರಾಜ್ಯಗಳಲ್ಲಿ ಒಟ್ಟು ಒಂಬತ್ತು ಜನರನ್ನು ಬಂಧಿಸಲಾಗಿದೆ. ಅಲ್ಲದೆ, ಈ ಪ್ರಕರಣದ ನಂಟಿರುವ ಶಂಕೆಯ ಮೇರೆಗೆ ಸುಮಾರು 45ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ.
- Advertisement -


