Sunday, June 7, 2026
Homeಕರಾವಳಿಕುಕ್ಕೆಯಲ್ಲಿ ನೆಗೆಟಿವ್ ವರದಿ ಇದ್ದರಷ್ಟೇ ಸೇವೆಗೆ ಅವಕಾಶ!

ಕುಕ್ಕೆಯಲ್ಲಿ ನೆಗೆಟಿವ್ ವರದಿ ಇದ್ದರಷ್ಟೇ ಸೇವೆಗೆ ಅವಕಾಶ!

- Advertisement -
- Advertisement -

ಸುಬ್ರಹ್ಮಣ್ಯ: 2 ಡೋಸ್‌ ಲಸಿಕೆ ಪಡೆದ ಮತ್ತು 72 ಗಂಟೆ ಮುಂಚಿತವಾಗಿ ಆರ್‌ಟಿಪಿಸಿಆರ್‌ ನೆಗೆಟಿವ್‌ ವರದಿ ಹೊಂದಿದ್ದರೆ ಮಾತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇವರ ದರ್ಶನ ಮತ್ತು ಸೇವೆಗಳನ್ನು ನೆರವೇರಿಸಲು ಅವಕಾಶವನ್ನು ಮಾಡಿಕೊಡಲಾಗಿದೆ.

ದೇವಸ್ಥಾನದಲ್ಲಿ ದೇವರ ದರ್ಶನ ಮತ್ತು ಸೇವೆಗಳನ್ನು ನೆರವೇರಿಸಲು ಕೋವಿಡ್‌ ಮಾರ್ಗಸೂಚಿ ಪಾಲನೆ ಕಡ್ಡಾಯವಾಗಿದ್ದು, ಸೇವೆ ಮತ್ತು ದರ್ಶನ ಸಂದರ್ಭ ಕಡ್ಡಾಯವಾಗಿ ಮಾಸ್ಕ್ ಧಾರಣೆ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಅಲ್ಲಲ್ಲಿ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಮಾತ್ರವಲ್ಲದೇ ಈ ಸಿಬ್ಬಂದಿ ಭಕ್ತರಿಗೆ ಕೋವಿಡ್‌ ಜಾಗೃತಿಯನ್ನು ಮೂಡಿಸುತ್ತಿದ್ದಾರೆ.

ಇನ್ನು ಸರ್ಪಸಂಸ್ಕಾರ ಸೇವೆ ನೆರವೇರಿಸಲು ದಿನಕ್ಕೆ 100 ಭಕ್ತರಿಗೆ ಮಾತ್ರ ಅವಕಾಶವನ್ನು ಕಲ್ಪಿಸಲಾಗಿದ್ದು, ಜೊತೆಗೆ 25 ನಾಗಪ್ರತಿಷ್ಠೆ, 4 ಪಂಚಾಮೃತ ಮಹಾಭಿಷೇಕಕ್ಕೆ ಅವಕಾಶವಿದೆ. ಪ್ರತಿ ದಿನ 4 ಪಾಳಿಯಲ್ಲಿ ಆಶ್ಲೇಷಾ ಬಲಿ ಸೇವೆ ನಡೆಯುತ್ತಿದ್ದು, ಒಂದು ಪಾಳಿಯಲ್ಲಿ 70 ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಸೇವೆಗೆ ಪ್ರತಿ ರಸೀದಿಯಿಂದ 2 ಜನ ಮಾತ್ರ ಭಾಗವಹಿಸಲು ಅವಕಾಶ ನೀಡಲಾಗಿದೆ.

ದೇವಸ್ಥಾನ ಹಾಗೂ ಷಣ್ಮುಖ ಪ್ರಸಾದ ಭೋಜನ ಶಾಲೆಯನ್ನು ಪ್ರತಿದಿನ ತೊಳೆದು ವೈರಾಣು ತಡೆ ಔಷಧ ಸಿಂಪಡಿಸಲಾಗುತ್ತಿದೆ. ಭಕ್ತರಿಗೆ ಸೂಕ್ತ ಮಾಹಿತಿಗಳನ್ನು ನೀಡಲು ಅಲ್ಲಲ್ಲಿ ಸೂಚನಾ ಫ‌ಲಕವನ್ನು ಅಳವಡಿಸಲಾಗಿದೆ.

ದೇಗುಲದಲ್ಲಿ ರಾಜಗೋಪುರದ ಬಳಿ ಲಸಿಕಾ ಕೇಂದ್ರವಲ್ಲದೇ ಆರ್‌ಟಿಪಿಸಿಆರ್‌ ಪರೀಕ್ಷಾ ಕೇಂದ್ರವನ್ನು ತೆರೆಯಲಾಗಿದೆ. ದೇಗುಲದ ಎಲ್ಲ ಸಿಬಂದಿ ಎರಡು ಡೋಸ್‌ ಕೋವಿಡ್‌ ಲಸಿಕೆ ಪಡೆದುಕೊಂಡಿದ್ದು, ಆಗಾಗ್ಗೆ ಆರ್‌ಟಿಪಿಸಿಆರ್‌ ಪರೀಕ್ಷೆ ಮಾಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ಅವರು ತಿಳಿಸಿದ್ದಾರೆ.

- Advertisement -

Latest News

error: Content is protected !!