Saturday, May 25, 2024
Homeಕರಾವಳಿಬೆಳ್ತಂಗಡಿ; ಗಾಯವಾದರೂ ಪ್ರಥಮ ಚಿಕಿತ್ಸೆ ನೀಡದೆ ಶಿಕ್ಷಕರ ನಿರ್ಲಕ್ಷ್ಯ; ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್

ಬೆಳ್ತಂಗಡಿ; ಗಾಯವಾದರೂ ಪ್ರಥಮ ಚಿಕಿತ್ಸೆ ನೀಡದೆ ಶಿಕ್ಷಕರ ನಿರ್ಲಕ್ಷ್ಯ; ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್

spot_img
- Advertisement -
- Advertisement -

ಬೆಳ್ತಂಗಡಿ: ಆಟವಾಡುತ್ತಿದ್ದ ಬಾಲಕನೋರ್ವ ಜಾರಿ ಬಿದ್ದು ತಲೆ ಹಿಂಬದಿ ಗಾಯವಾಗಿ ರಕ್ತಸ್ರಾವವಾದರೂ ಶಿಕ್ಷಕರು ಆಸ್ಪತ್ರೆಗೆ ಕರೆದೊಯ್ಯದೆ ನಿರ್ಲಕ್ಷ್ಯ ತೋರಿದ ಘಟನೆ ಬೆಳ್ತಂಗಡಿ ತಾಲೂಕಿನ ತೋಟತ್ತಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

ಆಟ ಆಡುವ ವೇಳೆ ಶಾಲೆಯ ನಾಲ್ಕನೇ ತರಗತಿ ವಿದ್ಯಾರ್ಥಿಯೊಬ್ಬ ಬಿದ್ದು ತಲೆಗೆ ಗಾಯವಾಗಿದೆ. ಕೂಡಲೆ ಶಿಕ್ಷಕರು ಪ್ರಥಮ ಚಿಕಿತ್ಸೆ ನೀಡಿ ಸ್ಥಳೀಯ ಆಸ್ಪತ್ರೆಗೆ ಸಾಗಿಸುವ ಬದಲು ಮಕ್ಕಳಿಂದಲೇ ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ ಎಂಬ ಆರೋಪ‌ ಕೇಳಿ‌ ಬಂದಿದೆ. ಬಳಿಕ ತಡವಾಗಿ ಮಗುವನ್ನು ಆಸ್ಪತ್ರೆಗೆ ಸೇರಿಸಿದ್ದಾರೆ ಎನ್ನಲಾಗಿದೆ.

ಗಾಯಗೊಂಡ ವಿದ್ಯಾರ್ಥಿಗೆ ಶಿಕ್ಷಕರು ಪ್ರಥಮ ಚಿಕಿತ್ಸೆ ನೀಡಲು ಮುಂದಾಗದೆ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಕ್ಕಳೇ ಪ್ರಥಮ ಚಿಕಿತ್ಸೆ ನೀಡುತ್ತಿರುವ ಘಟನೆಯನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿ  ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಲಾಗಿತ್ತು.

ಘಟನೆಯ ಬಗ್ಗೆ ಶಾಲೆಯಲ್ಲಿ ಶಾಲಾಭಿವೃದ್ಧಿ ಸಮಿತಿ ಹಾಗೂ ಹಳೇ ವಿದ್ಯಾರ್ಥಿ ಸಂಘದ ವತಿಯಿಂದ ಶನಿವಾರ ಸಭೆ ನಡೆದಿದ್ದು ಮುಂದೆ ಇಂತಹ ಘಟನೆ ಮರುಕಳಿಸದಂತೆ ನಿರ್ಣಯ ಕೈಗೊಳ್ಳಲಾಗಿದೆ ಎಂದು ಅಲ್ಲಿನ ಶಿಕ್ಷಕರು ತಿಳಿಸಿದ್ದಾರೆ.

ಘಟನೆ ಕುರಿತು ಮಾಹಿತಿ ಲಭಿಸಿದ್ದು, ಮಗು ಆರೋಗ್ಯವಾಗಿದೆ. ಸೋಮವಾರ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುವುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!