Friday, May 3, 2024
Homeಕರಾವಳಿನೇಹಾ ಹತ್ಯೆ ಪ್ರಕರಣ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ ನೀಡುವಂತೆ ವಿಎಚ್‌ಪಿ ಆಗ್ರಹ

ನೇಹಾ ಹತ್ಯೆ ಪ್ರಕರಣ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ ನೀಡುವಂತೆ ವಿಎಚ್‌ಪಿ ಆಗ್ರಹ

spot_img
- Advertisement -
- Advertisement -

ಮಂಗಳೂರು: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸದಸ್ಯ ನಿರಂಜನ ಹಿರೇಮಠ ಪುತ್ರಿ ಹುಬ್ಬಳ್ಳಿ ಕಾಲೇಜಿನ ಎಂಸಿಎ ಪ್ರಥಮ ವರ್ಷದ ವಿದ್ಯಾರ್ಥಿನಿ ನೇಹಾಳ ಹತ್ಯೆ ಪ್ರಕರಣವನ್ನು ಎನ್‌ಐಎ ತನಿಖೆಗೆ ನೀಡಬೇಕು ಎಂದು ವಿಶ್ವ ಹಿಂದೂ ಪರಿಷತ್ ಒತ್ತಾಯಿಸಿದೆ.

ವಿಶ್ವಹಿಂದೂ ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಶನಿವಾರದಂದು ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಮತಾಂಧ ಫಯಾಜ್ 9 ಬಾರಿ ಇರಿದು ನೇಹಾಳನ್ನು ಕೊಲೆ ಮಾಡಿದ್ದಾನೆ. ಇದರಿಂದ ಭಯದ ವಾತಾವರಣ ನಿರ್ಮಾಣವಾಗಿದೆ. ಈ ಘಟನೆಯ ರೂವಾರಿ ಫಯಾಜ್‌ನ ಹಿಂದೆ ಆತನ ಸ್ನೇಹಿತರು, ಮುಸ್ಲಿಂ ಜಿಹಾದಿ ಸಂಘಟನೆಗಳ ಕೈವಾಡವಿರುವ ಶಂಕೆ ಇದೆ. ಇಂತಹ ಲವ್ ಜಿಹಾದ್ ಘಟನೆಗಳು ಹೆಚ್ಚುತ್ತಿವೆ. ಹಾಗಾಗಿ ಎನ್‌ಐಎ ತನಿಖೆಯಾಗಬೇಕು,’ ಎಂದು ಹೇಳಿದರು.

‘ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ವಹಿಸಿಕೊಂಡ ಅನಂತರ ಹಿಂದೂಗಳ ಮೇಲೆ ಇಸ್ಲಾಮಿಕ್ ಆಕ್ರಮಣಗಳು ನಡೆಯುತ್ತಲಿದೆ. ಹಿಂದೂಗಳಲ್ಲಿ ಭಯ ಹುಟ್ಟಿಸಿ ರಾಜ್ಯವನ್ನು ಇಸ್ಲಾಮೀಕರಣಗೊಳಿಸಲು ಮೂಲಭೂತವಾದಿ ಗುಂಪುಗಳ ಸಂಚು ರೂಪಿಸುತ್ತಿವೆ. ಯುವತಿಯರ ಮೇಲೆ ದೌರ್ಜನ್ಯ ಹೆಚ್ಚಾಾಗುತ್ತಿದೆ ಎಂದರು.

ಕಿರುಕತ್ತಿಗೆ ಅವಕಾಶ: ಪಂಜಾಬ್‌ನಲ್ಲಿ ಮಹಿಳೆಯರು ತಮ್ಮ ರಕ್ಷಣೆಗೆ ಧರಿಸುವ ಕಿರುಕತ್ತಿಯಂತೆ (ಕಿರ್ಪಣ್) ಕರ್ನಾಟಕದಲ್ಲಿಯೂ ಮಹಿಳೆಯರು ತಮ್ಮ ಆತ್ಮರಕ್ಷಣೆಗೆ ಕಿರುಕತ್ತಿ ಹೊಂದಲು ಕಾನೂನು ತರಬೇಕು. ಯುವತಿಯರ ಆತ್ಮರಕ್ಷಣೆಗೆ ತರಬೇತಿ ಶಿಬಿರ ಆಯೋಜಿಸಲು ಕ್ರಮ ಕೈಗೊಳ್ಳಬೇಕು ಎಂದು ಶರಣ್ ಪಂಪ್‌ವೆಲ್ ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ವಿಎಚ್‌ಪಿ ಪ್ರಾಂತ ಸಹಸಂಯೋಜಕ ಭುಜಂಗ ಕುಲಾಲ್, ಜಿಲ್ಲಾಧ್ಯಕ್ಷ ಎಚ್.ಕೆ.ಪುರುಷೋತ್ತಮ, ಬಜರಂಗದಳ ವಿಭಾಗ ಸಂಯೋಜಕ ಪುನೀತ್ ಅತ್ತಾವರ ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!