Thursday, September 3, 2026
Homeಕರಾವಳಿಮಂಗಳೂರುನೆಲ್ಯಾಡಿ; ಲಾವತ್ತಡ್ಕ ಸಮೀಪ ಬೈಕ್ ಸ್ಕಿಡ್ ಆಗಿ ಬೈಕ್ ಸವಾರ ಸಾವು

ನೆಲ್ಯಾಡಿ; ಲಾವತ್ತಡ್ಕ ಸಮೀಪ ಬೈಕ್ ಸ್ಕಿಡ್ ಆಗಿ ಬೈಕ್ ಸವಾರ ಸಾವು

- Advertisement -
- Advertisement -

ನೆಲ್ಯಾಡಿ;ಲಾವತ್ತಡ್ಕ ಸಮೀಪ ಬೈಕ್ ಸ್ಕಿಡ್ ಆಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಲಾವತ್ತಡ್ಕ ಸಮೀಪ ಜ. 23 ಮಧ್ಯಾಹ್ನ ಸಂಭವಿಸಿದೆ.ಶಿರಾಡಿ ಗ್ರಾಮದ ಮಿತ್ತಮಜಲು ನಿವಾಸಿ ಜಾಯ್ (51) ಮೃತ ದುರ್ದೈವಿ.

ಜಾಯ್ ತಮ್ಮ ಬೈಕ್‌ನಲ್ಲಿ ಸಂಚರಿಸುತ್ತಿದ್ದಾಗ ಪೆರಿಯಶಾಂತಿ ಬಳಿಯ  ಲಾವತ್ತಡ್ಕ ಎಂಬಲ್ಲಿ ಬೈಕ್ ನಿಯಂತ್ರಣ ತಪ್ಪಿ ಸ್ಕಿಡ್ ಆಗಿದೆ. ಅಪಘಾತದ ತೀವ್ರತೆಗೆ ಬೈಕ್ ಪಲ್ಟಿಯಾಗಿದ್ದು, ಜಾಯ್ ಅವರು ಗಂಭೀರವಾಗಿ ಗಾಯಗೊಂಡು ರಸ್ತೆಯಲ್ಲೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸುವ ಪ್ರಕ್ರಿಯೆ ನಡೆಯುತ್ತಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ ಹಿನ್ನೆಲೆಯಲ್ಲಿ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿತ್ತು.

- Advertisement -

Latest News

error: Content is protected !!