Thursday, October 22, 2026
Homeಕರಾವಳಿಮಂಗಳೂರುನೆಲ್ಯಾಡಿ: ಹೆದ್ದಾರಿಯಲ್ಲಿ ನಿಂತಿದ್ದ ಗ್ಯಾಸ್ ಟ್ಯಾಂಕರ್‌ಗೆ ಕಾರು ಡಿಕ್ಕಿ: ಪುತ್ತೂರು ಕಾಲೇಜು ವಿದ್ಯಾರ್ಥಿ ದಾರುಣ ಸಾವು

ನೆಲ್ಯಾಡಿ: ಹೆದ್ದಾರಿಯಲ್ಲಿ ನಿಂತಿದ್ದ ಗ್ಯಾಸ್ ಟ್ಯಾಂಕರ್‌ಗೆ ಕಾರು ಡಿಕ್ಕಿ: ಪುತ್ತೂರು ಕಾಲೇಜು ವಿದ್ಯಾರ್ಥಿ ದಾರುಣ ಸಾವು

- Advertisement -
- Advertisement -

ನೆಲ್ಯಾಡಿ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಕರ್ಬಸಂಕದ ಬಳಿ ಗುರುವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪುತ್ತೂರು ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನೆಲ್ಯಾಡಿಯಲ್ಲಿ ‘ಪ್ಲವರ್ಸ್ ಹೋಟೆಲ್’ ನಡೆಸುತ್ತಿರುವ ಜೋಜೋ ಟಿ. ಜೋರ್ಜ್ ಅವರ ಪುತ್ರ ಅಶ್ವಿನ್ ಜೋಜೋ ಜೋರ್ಜ್ (16) ಮೃತ ದುರ್ದೈವಿ.

ಗುರುವಾರ ಮುಂಜಾನೆ ನೆಲ್ಯಾಡಿ ಕರ್ಬಸಂಕದ ಸಮೀಪ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಿಲ್ಲಿಸಲಾಗಿದ್ದ ಗ್ಯಾಸ್ ಟ್ಯಾಂಕರ್‌ಗೆ ಅಶ್ವಿನ್ ಚಲಾಯಿಸುತ್ತಿದ್ದ ಕಾರು ಹಿಂದಿನಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಗಂಭೀರವಾಗಿ ಗಾಯಗೊಂಡ ಅಶ್ವಿನ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ. ವಿದ್ಯಾರ್ಥಿಯ ಅಕಾಲಿಕ ಮರಣದಿಂದ ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ತೀವ್ರ ಶೋಕ ವ್ಯಕ್ತವಾಗಿದೆ.

- Advertisement -

Latest News

error: Content is protected !!