Saturday, October 17, 2026
Homeಕರಾವಳಿಮಂಗಳೂರುನೆಲ್ಯಾಡಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

ನೆಲ್ಯಾಡಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

- Advertisement -
- Advertisement -

ನೆಲ್ಯಾಡಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದ ಘಟನೆ ನೆಲ್ಯಾಡಿಯ ಸಮೀಪದ ಬರೆಗುಡ್ಡೆ ತಿರುವಿನಲ್ಲಿ ನಡೆದಿದೆ. ನೆಲ್ಯಾಡಿಯಿಂದ ಬಲ್ಯ ಕಡೆಗೆ ಉಮೇಶ್ ಎಂಬವರು ತಮ್ಮ ಕಾರನ್ನು ಚಲಾಯಿಸಿಕೊಂಡು ಹೋಗುತ್ತಿದ್ದರು. ಬರೆಗುಡ್ಡೆ ತಿರುವಿನ ಸಮೀಪ ತಲುಪಿದಾಗ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯಿದ್ದ 11 ಕೆವಿ ವಿದ್ಯುತ್ ತಂತಿಯಿದ್ದ ಕಂಬಕ್ಕೆ ಬಲವಾಗಿ ಡಿಕ್ಕಿಯಾಗಿದೆ. ಡಿಕ್ಕಿಯ ತೀವ್ರತೆಗೆ ವಿದ್ಯುತ್ ಕಂಬವು ಸಂಪೂರ್ಣವಾಗಿ ತುಂಡಾಗಿ ನೆಲಕ್ಕುರುಳಿದೆ.

11 ಕೆವಿ ಲೈನ್‌ ಕಂಬ ಮುರಿದು ಬಿದ್ದ ಪರಿಣಾಮ ಸುತ್ತಮುತ್ತಲಿನ ಪರಿಸರದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ. ಸ್ಥಳೀಯ ಮೆಸ್ಕಾಂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ದುರಸ್ತಿ ಕಾರ್ಯ ಕೈಗೊಂಡಿದ್ದಾರೆ. ಕಾರು ಜಖಂಗೊಂಡಿದ್ದರೂ, ಚಾಲಕ ಉಮೇಶ್ ಅವರು ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ .

- Advertisement -

Latest News

error: Content is protected !!