Thursday, June 4, 2026
Homeತಾಜಾ ಸುದ್ದಿನೆಲ್ಯಾಡಿ: ಗ್ಯಾಸ್ ಟ್ಯಾಂಕರ್ ಮತ್ತು ಡೀಸೆಲ್ ಟ್ಯಾಂಕರ್ ನಡುವೆ ಅಪಘಾತ, ವಾಹನ ಸಂಚಾರ ಸ್ಥಗಿತ

ನೆಲ್ಯಾಡಿ: ಗ್ಯಾಸ್ ಟ್ಯಾಂಕರ್ ಮತ್ತು ಡೀಸೆಲ್ ಟ್ಯಾಂಕರ್ ನಡುವೆ ಅಪಘಾತ, ವಾಹನ ಸಂಚಾರ ಸ್ಥಗಿತ

- Advertisement -
- Advertisement -

ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಅಶ್ವಿನಿ ಆಸ್ಪತ್ರೆಯ ಮುಂಭಾಗದಲ್ಲಿ ಇಂದು ಡೀಸೆಲ್ ಸಾಗಾಟದ ಟ್ಯಾಂಕರ್ ಹಾಗೂ ಗ್ಯಾಸ್ ಟ್ಯಾಂಕರ್ ನಡುವೆ ಅಪಘಾತ ನಡೆದಿದ್ದು ಕೆಲ ಹೊತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು.

ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಗ್ಯಾಸ್ ಟ್ಯಾಂಕರ್ ಮತ್ತು ಕೋಲಾರದಿಂದ ಮಂಗಳೂರಿಗೆ ಬರುತ್ತಿದ್ದ ಡೀಸೆಲ್ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಘಟನೆಯಲ್ಲಿ ಚಾಲಕರಿಬ್ಬರೂ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಅದೃಷ್ಟವಶಾತ್ ಯಾವುದೇ ರೀತಿಯ ಗ್ಯಾಸ್ ಸೋರಿಕೆ ಆಗಿಲ್ಲ.

ಈ ಪರಿಸರದಲ್ಲಿ ಇಂದು ನಸುಕಿನ ಸಮಯದಲ್ಲಿ ಅಧಿಕ ಮಂಜು ಆವರಿಸಿದ್ದು, ರಸ್ತೆಯಲ್ಲಿ ವಾಹನ ಸಂಚಾರವಾಗುವುದು ಗೋಚರಿಸದ ಕಾರಣ ಈ ಅಪಘಾತ ಸಂಭವಿಸಿರಬಹುದೆಂದು ಅಂದಾಜಿಸಲಾಗಿದೆ. ಅಪಘಾತದ ಕುರಿತು ನೆಲ್ಯಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!