Wednesday, June 3, 2026
Homeಕರಾವಳಿನೆಲ್ಯಾಡಿ ಗ್ರಾ.ಪಂ ಬಿಜೆಪಿ ಅಭ್ಯರ್ಥಿ ಹೃದಯಾಘಾತದಿಂದ ನಿಧನ

ನೆಲ್ಯಾಡಿ ಗ್ರಾ.ಪಂ ಬಿಜೆಪಿ ಅಭ್ಯರ್ಥಿ ಹೃದಯಾಘಾತದಿಂದ ನಿಧನ

- Advertisement -
- Advertisement -

ನೆಲ್ಯಾಡಿ ಇಲ್ಲಿನ ಗ್ರಾ.ಪಂ ನ ಎರಡನೇ ವಾರ್ಡ್‍ನ ಸಾಮಾನ್ಯ ಸ್ಥಾನಕ್ಕೆ ಸ್ಪರ್ಧಿಸಿದ್ದ ನೆಲ್ಯಾಡಿ ಗ್ರಾಮದ ಮೊರಂಕಳ ನಿವಾಸಿ ಅಬ್ದುಲ್ ಹಮೀದ್ ಪೈಂಟರ್ (60) ರವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ನಿನ್ನೆ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದ ಅಬ್ದುಲ್ ಹಮೀದ್ ರವರಿಗೆ ತಡರಾತ್ರಿ ವೇಳೆ ಎದೆನೋವು ಕಾಣಿಸಿಕೊಂಡಿತ್ತು. ಮನೆಯವರು ತಕ್ಷಣ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಂತೆ ದಾರಿ ಮಧ್ಯೆ ಅವರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. 

ಅಬ್ದುಲ್ ಹಮೀದ್ ರವರು ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. ಕಳೆದ ಅವಧಿಯಲ್ಲಿ ನೆಲ್ಯಾಡಿ ಗ್ರಾ.ಪಂ ನಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರಾಗಿದ್ದರು. ಆದರೆ ಈ ಬಾರಿ ಅವರು ಬಿಜೆಪಿಗೆ ಸೇರ್ಪಡೆಗೊಂಡು ಬಿಜೆಪಿ ಅಭ್ಯರ್ಥಿಯಾಗಿ ನೆಲ್ಯಾಡಿ ಗ್ರಾ.ಪಂ ನ 2ನೇ ವಾರ್ಡ್‍ನ ಸಾಮಾನ್ಯ ಸ್ಥಾನಕ್ಕೆ ಸ್ಪರ್ಧಿಸಿದ್ದರು.

- Advertisement -

Latest News

error: Content is protected !!