Wednesday, June 24, 2026
Homeಕರಾವಳಿಮಂಗಳೂರುನೆಲ್ಯಾಡಿ: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

ನೆಲ್ಯಾಡಿ: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

- Advertisement -
- Advertisement -

ನೆಲ್ಯಾಡಿ: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿರುವ ಘಟನೆ ಪೆರಿಯಶಾಂತಿ-ಇಚಿಲಂಪಾಡಿ ರಸ್ತೆಯ ಅರಣ್ಯ ಪ್ರದೇಶದಲ್ಲಿಸ ನಡೆದಿದೆ. ಇಚಿಲಂಪಾಡಿ ಗ್ರಾಮದ ಬಿಜೀರು ನಿವಾಸಿ ಎಸ್. ಸಜೀವ (46) ಮೃತರು.

ವೃತ್ತಿಯಲ್ಲಿ ಕೃಷಿಕರಾಗಿದ್ದ ಸಜೀವ ಅವರು ಶನಿವಾರ ಬೆಳಿಗ್ಗೆ ತಮ್ಮ ಬೈಕ್‌ನಲ್ಲಿ ಮನೆಯಿಂದ ಹೋದವರು ರಾತ್ರಿಯಾದರೂ ಅವರು ಮನೆಗೆ ಮರಳದಿದ್ದಾಗ ಗಾಬರಿಗೊಂಡ ಕುಟುಂಬಸ್ಥರು ಮತ್ತು ಸ್ಥಳೀಯರು ವಿವಿಧೆಡೆ ಹುಡುಕಾಟ ನಡೆಸಿದ್ದರು. ಭಾನುವಾರ ಬೆಳಿಗ್ಗೆ ಪೆರಿಯಶಾಂತಿ ಮತ್ತು ಇಚಿಲಂಪಾಡಿ ಸಂಪರ್ಕಿಸುವ ರಸ್ತೆಯ ಬದಿಯಲ್ಲಿ ಅವರ ಬೈಕ್ ಪತ್ತೆಯಾದ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಅರಣ್ಯ ಪ್ರದೇಶದಲ್ಲಿ ಹುಡುಕಿದಾಗ  ಮರವೊಂದರ ಬುಡದಲ್ಲಿ ಸಜೀವ ಅವರ ಮೃತದೇಹ ಪತ್ತೆಯಾಗಿದೆ. ಮೃತದೇಹದ ಸಮೀಪ ಮದ್ಯದ ಬಾಟಲಿಗಳು ಕಂಡುಬಂದಿದ್ದು, ಪ್ರಾಥಮಿಕ ತನಿಖೆಯ ಪ್ರಕಾರ ಅವರು ಮದ್ಯದ ಜೊತೆಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ನೆಲ್ಯಾಡಿ ಹೊರಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ವರದಿ ಬಂದ ನಂತರ ಸಾವಿನ ನಿಖರ ಕಾರಣ ತಿಳಿದುಬರಬೇಕಿದೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

- Advertisement -

Latest News

error: Content is protected !!