- Advertisement -
![]()
- Advertisement -
ಮಂಗಳೂರು; ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ನೆಲ್ಯಾಡಿಯ ಉಷಾ ಅಂಚನ್ ನೇಮಕವಾಗಿದ್ದಾರೆ. ತಾಲೂಕು ಪಂಚಾಯತ್ ಮಾಜಿ ಸದಸ್ಯೆಯಾಗಿರುವ ಉಷಾ ಅಂಚನ್ ಪ್ರಸ್ತುತ ದ.ಕ.ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಜ್ಯ ಮಹಿಳಾ ಕಾಂಗ್ರೆಸ್ ಸಮಿತಿ ಉಸ್ತುವಾರಿಯೂ ಆಗಿರುವ ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿಯವರ ಸೂಚನೆಯಂತೆ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಸೌಮ್ಯ ರೆಡ್ಡಿಯವರ ಶಿಫಾರಸಿನ ಮೇರೆಗೆ ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲ್ಲಾ ಲಂಬಾ ಅವರು ಈ ನೇಮಕ ಮಾಡಿದ್ದಾರೆ.
- Advertisement -


