Thursday, June 4, 2026
Homeತಾಜಾ ಸುದ್ದಿಈ ವರ್ಷದಿಂದಲೇ 1 ಮತ್ತು 2ನೇ ತರಗತಿಗೆ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ: ಶಿಕ್ಷಣ ಸಚಿವ...

ಈ ವರ್ಷದಿಂದಲೇ 1 ಮತ್ತು 2ನೇ ತರಗತಿಗೆ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ: ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿಕೆ

- Advertisement -
- Advertisement -

ಬೆಂಗಳೂರು : ಈ ವರ್ಷದಿಂದಲೇ (2022-23 ನೇ ಸಾಲಿನಿಂದ) ರಾಜ್ಯದಲ್ಲಿ 1 ಮತ್ತು 2 ನೇ ತರಗತಿಗೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿ (NEP) ಅನುಷ್ಠಾನಗೊಳಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ಪೂರ್ವ ಪ್ರಾಥಮಿಕ ಅಥವಾ ಅಂಗನವಾಡಿ ಹಂತದಿಂದಲೇ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗಬೇಕು. ಇದಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕ್ರಮ ವಹಿಸಲಿದೆ. ಶಿಕ್ಷಣ ಇಲಾಖೆಯಿಂದ 1 ಮತ್ತು 2 ನೇ ತರಗತಿಗೆ ಈ ವರ್ಷ ಎನ್ ಇಪಿ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಶಾಲಾ ಶಿಕ್ಷಣದಲ್ಲಿ ಹೇಗೆ ಜಾರಿಗೊಳಿಸಬೇಕು, ಪಠ್ಯ ಪುಸ್ತಕ ರಚನೆ ಎಲ್ಲವನ್ನೂ ಕುರಿತು ಕರಡುನಿಯಮಾವಳಿ ರೂಪಿಸಿ ನೀಡಲು ನಿವೃತ್ತ ಐಎಎಸ್ ಅಧಿಕಾರಿ ಮದನ್ ಗೋಪಾಲ್ ಅವರ ನೇತೃತ್ವದ ಸಮಿತಿ ರಚಿಸಲಾಗಿದೆ. ಸಮಿತಿ ನೀಡುವ ವರದಿ ಆಧರಿಸಿ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

- Advertisement -

Latest News

error: Content is protected !!