Tuesday, May 21, 2024
Homeತಾಜಾ ಸುದ್ದಿಮುಂದಿನ ಶೈಕ್ಷಣಿಕ ವರ್ಷದಿಂದ ಎನ್ಇಪಿ ರದ್ದು:ಕಾಂಗ್ರೆಸ್ ಸರ್ವ ಸದಸ್ಯರ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ

ಮುಂದಿನ ಶೈಕ್ಷಣಿಕ ವರ್ಷದಿಂದ ಎನ್ಇಪಿ ರದ್ದು:ಕಾಂಗ್ರೆಸ್ ಸರ್ವ ಸದಸ್ಯರ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ

spot_img
- Advertisement -
- Advertisement -

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ ಎನ್ಇಪಿ ರದ್ದುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಕೆಪಿಸಿಸಿ ಕಚೇರಿಯಲ್ಲಿ ನಡೆದ ಕರ್ನಾಟಕ ಕಾಂಗ್ರೆಸ್ ಸಮಿತಿಯ ಸರ್ವ ಸದಸ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಈ ಹೇಳಿಕೆ ನೀಡಿದ್ದಾರೆ.

ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಸಂಪೂರ್ಣ ರದ್ದುಗೊಳಿಸಲಾಗುವುದು ಎಂದು‌‌ ಸಿದ್ದರಾಮಯ್ಯ ಹೇಳಿದ್ದಾರೆ.

ಅಗತ್ಯವಾದ ಕೆಲವೊಂದು ಸಿದ್ಧತೆಗಳನ್ನು ಮಾಡಿಕೊಂಡು ಎನ್ ಇಪಿ ರದ್ದುಗೊಳಿಸಬೇಕಿದೆ. ಈ ವರ್ಷ ಅದಕ್ಕೆ ಸಮಯ ಇರಲಿಲ್ಲ. ಚುನಾವಣೆ ಫಲಿತಾಂಶ ಬಂದು ಸರ್ಕಾರ ರಚನೆ ಆಗುವ ವೇಳೆಗೆ ಶೈಕ್ಷಣಿಕ ವರ್ಷ ಆರಂಭವಾಗಿತ್ತು. ಮಧ್ಯದಲ್ಲಿ ಸಮಸ್ಯೆ ಆಗಬಾರದು ಎನ್ನುವ ಕಾರಣದಿಂದ ಈ ವರ್ಷ ಹಾಗೆಯೇ ಮುಂದುವರೆದಿದೆ‌ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಅಲ್ಲದೇ, ಎನ್ ಇಪಿಗೆ ಏಕ ಕಾಲದಲ್ಲಿ ವಿದ್ಯಾರ್ಥಿಗಳು, ಪೋಷಕರು ಮತ್ತು ಉಪನ್ಯಾಸಕರು ಹಾಗೂ ಶಿಕ್ಷಕರ ವಿರೋಧವಿದೆ. ಬಿಜೆಪಿ ದೇಶದಲ್ಲಿ ಎಲ್ಲಾ ರಾಜ್ಯಗಳಲ್ಲಿ ಜಾರಿಗೊಳಿಸದೇ ರಾಜ್ಯದಲ್ಲಿ ಮೊದಲ ಬಾರಿಗೆ ಜಾರಿಗೊಳಿಸಿ ನಾಡಿನ ವಿದ್ಯಾರ್ಥಿ ಸಮೂಹದ ಹಿತಾಸಕ್ತಿಯನ್ನು ಬಲಿಕೊಟ್ಟಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!