Saturday, August 29, 2026
Homeಪ್ರಮುಖ-ಸುದ್ದಿನೇಪಾಳ ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ 626ಕ್ಕೆ ಏರಿಕೆ; 2,500ಕ್ಕೂ ಹೆಚ್ಚು ಮಂದಿ ನಾಪತ್ತೆ

ನೇಪಾಳ ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ 626ಕ್ಕೆ ಏರಿಕೆ; 2,500ಕ್ಕೂ ಹೆಚ್ಚು ಮಂದಿ ನಾಪತ್ತೆ

- Advertisement -
- Advertisement -

ನೇಪಾಳ ಮತ್ತು ಚೀನಾ ಗಡಿ ಸಮೀಪ ಹಿಮನದಿ (Glacier) ಕುಸಿದು ಭೋಟೆ ಕೋಶಿ ನದಿಯಲ್ಲಿ ಉಂಟಾದ ಭೀಕರ ಪ್ರವಾಹದಿಂದಾಗಿ ಬಲಿಯಾದವರ ಸಂಖ್ಯೆ 626ಕ್ಕೆ ಏರಿಕೆಯಾಗಿದೆ.

ಈವರೆಗೆ 4,400ಕ್ಕೂ ಅಧಿಕ ಜನರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದ್ದರೂ, ನೇಪಾಳ ಮತ್ತು ಟಿಬೆಟ್ ಗಡಿ ಭಾಗ ಸೇರಿದಂತೆ ಒಟ್ಟಾರೆಯಾಗಿ 2,500ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ಇದೇ ದುರಂತದಿಂದ ಚೀನಾದಲ್ಲಿಯೂ 7 ಜನರು ಸಾವನ್ನಪ್ಪಿದ್ದಾರೆ.

ಲ್ಹೆಂಡೆ ಖೋಲಾ ನದಿಗೆ ಭಾರಿ ಪ್ರಮಾಣದ ಮಂಜುಗಡ್ಡೆ ಮತ್ತು ಬಂಡೆಗಳು ಹರಿದು ಬಂದು ನದಿಯ ನೀರಿನ ಮಟ್ಟ ದಿಢೀರ್ ಹೆಚ್ಚಾದ ಪರಿಣಾಮ, ರಸುವಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ತೀವ್ರಗೊಂಡಿದ್ದು, ನೇಪಾಳ ಸರ್ಕಾರದ ಕೋರಿಕೆಯ ಮೇರೆಗೆ ಭಾರತವು 11 ಸದಸ್ಯರ ತಜ್ಞರ ತಂಡವನ್ನು ಕಳುಹಿಸಿಕೊಟ್ಟಿದೆ. ವೈದ್ಯಕೀಯ ಸಿಬ್ಬಂದಿ ಮತ್ತು ಸುರಂಗ ರಕ್ಷಣಾ ತಜ್ಞರನ್ನೊಳಗೊಂಡ ಈ ಭಾರತೀಯ ತಂಡವು ಶನಿವಾರ ನೇಪಾಳಕ್ಕೆ ತಲುಪಿದ್ದು, ದುರಂತದಿಂದ ತೀವ್ರವಾಗಿ ಹಾನಿಗೊಳಗಾದ ಪ್ರದೇಶಗಳಲ್ಲಿ ಸ್ಥಳೀಯ ಅಧಿಕಾರಿಗಳೊಂದಿಗೆ ಕೈಜೋಡಿಸಿ ಪರಿಹಾರ ಮತ್ತು ರಕ್ಷಣಾ ಕಾರ್ಯಗಳಲ್ಲಿ ನಿರತವಾಗಿದೆ.

- Advertisement -

Latest News

error: Content is protected !!