Monday, June 8, 2026
Homeಅಪರಾಧಬೆಳ್ತಂಗಡಿ : ಸುಖಾಂತ್ಯ ಕಂಡ ನೆರಿಯ ಗ್ರಾಮದ ಸ್ಮಶಾನ ಗೊಂದಲ,ಗ್ರಾ.ಪಂ ಪಕ್ಕದಲ್ಲಿ ಸ್ಮಶಾನಕ್ಕೆ ಜಾಗ ಮೀಸಲು...

ಬೆಳ್ತಂಗಡಿ : ಸುಖಾಂತ್ಯ ಕಂಡ ನೆರಿಯ ಗ್ರಾಮದ ಸ್ಮಶಾನ ಗೊಂದಲ,ಗ್ರಾ.ಪಂ ಪಕ್ಕದಲ್ಲಿ ಸ್ಮಶಾನಕ್ಕೆ ಜಾಗ ಮೀಸಲು , ಶವವಿಟ್ಟು ಪ್ರತಿಭಟನೆ ಅಂತ್ಯ

- Advertisement -
- Advertisement -

ಬೆಳ್ತಂಗಡಿ: ನೆರಿಯ ಗ್ರಾಮದ ಸ್ಮಶಾನ ಭೂಮಿ ಗೊಂದಲವನ್ನು, ತಹಶೀಲ್ದಾರ್ ಪಂಚಾಯತ್ ಬಳಿ ಇರುವ ಕಂದಾಯ ಜಾಗವನ್ನು ಮೀಸಲಿರಿಸುವ ಮೂಲಕ ಸಮಸ್ಯೆ ಬಗೆಹರಿಸಿದ ಪರಿಣಾಮ ಗ್ರಾಮಸ್ಥರು ಪ್ರತಿಭಟನೆಯನ್ನು ಕೈ ಬಿಟ್ಟಿದ್ದಾರೆ.

ಬೆಳ್ತಂಗಡಿ ತಾಲೂಕು ನೆರಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ಮಶಾನ ಇಲ್ಲದಿರುವ ಬಗ್ಗೆ ಗ್ರಾಮಸ್ಥರು ಮೃತ ದೇಹ ಇಟ್ಟು ಪ್ರತಿಭಟನೆಯನ್ನು ಜು 15 ರಂದು ನಡೆಸಿದರು.ಸ್ಮಶಾನ ನಿಗದಿಗೊಳಿಸದೇ ಮೃತ ದೇಹದ ಅಂತಿಮ ಸಂಸ್ಕಾರ ಮಾಡುವುದಿಲ್ಲ ಎಂದು ಗ್ರಾಮಸ್ಥರು ಪ್ರತಿಭಟನೆ ಮಾಡಿದರು.


ಜು 14 ರಂದು ನೆರಿಯ ಗ್ರಾಮದ ಜನತಾಕಾಲನಿ ನಿವಾಸಿ ಸಂಜೀವ ಗೌಡ (49ವ) ರವರು ಮೃತ ಪಟ್ಟಿದ್ದು ಮೃತರ ಅಂತ್ಯ ಸಂಸ್ಕಾರ ನಡೆಸಲು ನೆರಿಯ ಗ್ರಾಮದಲ್ಲಿ ಸ್ಮಶಾನ ಇರದೇ ಇರುವುದರಿಂದ ನೆರಿಯ ಗ್ರಾಮ ಪಂಚಾಯತ್ ಎದುರುಗಡೆ ಅಂತ್ಯ ಸಂಸ್ಕಾರ ನಡೆಸಲು ಗ್ರಾಮಸ್ಥರು ಸಿದ್ಧತೆ ನಡೆಸಿದ್ದಾರೆ.ಈ ವೇಳೆ ಸ್ಥಳಕ್ಕೆ ಬೆಳ್ತಂಗಡಿ ತಹಶೀಲ್ದಾರ್ ಭೇಟಿ ನೀಡಿದಾಗ ಇವತ್ತೇ ಸ್ಮಶಾನಕ್ಕೆ ಜಾಗ ಗುರುತಿಸಿಕೊಡಬೇಕು ಅದೇ ಜಾಗದಲ್ಲಿ ಮೃತದೇಹದ ಅಂತ್ಯ ಸಂಸ್ಕಾರ ಮಾಡುವುದಾಗಿ ಗ್ರಾಮಸ್ಥರು ಪಟ್ಟು ಹಿಡಿದಿದ್ದರು.

ಈಗಾಗಲೇ ಇಟ್ಟಾಡಿ ಎಂಬಲ್ಲಿ ಸ್ಮಶಾನಕ್ಕಾಗಿ ಜಾಗ ಮೀಸಲಿರಿಸಿದ ಸ್ಥಳವನ್ನು ತಹಶೀಲ್ದಾರ್ ಹಾಗೂ ಅಧಿಕಾರಿಗಳು ಪರಿಶೀಲಿಸುವ ಸಂದರ್ಭ ಸ್ಥಳೀಯ ಕೆಲವರು ಆ ಜಾಗದಲ್ಲಿ ಸ್ಮಶಾನ ಮಾಡಲು ವಿರೋಧ ವ್ಯಕ್ತಪಡಿಸಿದರಲ್ಲದೇ ಯಾವುದೇ ಕಾರಣಕ್ಕೂ ಅಂತ್ಯ ಸಂಸ್ಕಾರಕ್ಕೆ ಅವಕಾಶ ಕೊಡುವುದಿಲ್ಲ ಎಂದು ರಸ್ತೆಗೆ ಅಡ್ಡಲಾಗಿ ಕೂತಾಗ ಸ್ವಲ್ಪ ಹೊತ್ತು ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಈ ಸಂದರ್ಭದಲ್ಲಿ ಗ್ರಾಮಸ್ಥರು ಪಂಚಾಯತ್ ಮುಂಭಾಗದಲ್ಲಿ ಅಂತ್ಯಸಂಸ್ಕಾರಕ್ಕೆ ಮಾಡಲು ಮುಂದಾಗಿ ಪಂಚಾಯತ್ ಪಕ್ಕದಲ್ಲಿ ಸರ್ಕಾರಿ ಭೂಮಿ ಇದೆ ಅದನ್ನು ಸ್ಮಶಾನಕ್ಕೆ ಮೀಸಲಿರಿಸಿ ಎಂದು ತಹಶೀಲ್ದಾರ್ ಅವರನ್ನು ಒತ್ತಾಯಿಸಿದ್ದಾರೆ.

ಈ ವೇಳೆ ತಹಶೀಲ್ದಾರ್ ಸೇರಿದಂತೆ ಅಧಿಕಾರಿಗಳು ಪಂಚಾಯತ್ ಬಳಿ ಇರುವ ಜಾಗವನ್ನು ಪರಿಶೀಲಿಸಿ ರುದ್ರಭೂಮಿಗೆ ಅಲ್ಲೆ ಮಾಡುವಂತೆ ಸೂಚಿಸಿದಾಗ ಗ್ರಾಮಸ್ಥರೆಲ್ಲ ಪ್ರತಿಭಟನೆಯನ್ನು ಹಿಂಪಡೆದು ಅದೇ ಜಾಗದಲ್ಲಿ ಸಂಜೀವ ಗೌಡ ಅವರ ಅಂತ್ಯ ಸಂಸ್ಕಾರವನ್ನು ನೆರವೇರಿಸಲು ವ್ಯವಸ್ಥೆ ಮಾಡುವ ಮೂಲಕ ತಾರಕಕ್ಕೇರಿದ ನೆರಿಯ ಸ್ಮಶಾನದ ಪ್ರತಿಭಟನೆ ಕೊನೆಗೂ ಸುಖಾಂತ್ಯಗೊಂಡಿದೆ.

- Advertisement -

Latest News

error: Content is protected !!