Wednesday, July 15, 2026
Homeಕರಾವಳಿಮಂಗಳೂರುಪಾಣೆ ಮಂಗಳೂರಿನಲ್ಲಿ 12 ಮನೆಗಳಿಗೆ ನುಗ್ಗಿದ ನೇತ್ರಾವತಿ ನದಿ ನೀರು

ಪಾಣೆ ಮಂಗಳೂರಿನಲ್ಲಿ 12 ಮನೆಗಳಿಗೆ ನುಗ್ಗಿದ ನೇತ್ರಾವತಿ ನದಿ ನೀರು

- Advertisement -
- Advertisement -

ಬಂಟ್ವಾಳ: ನೇತ್ರಾವತಿ ನದಿ ತುಂಬಿ ಹರಿಯುತ್ತಿರುವ ಕಾರಣ ಪಾಣೆಮಂಗಳೂರಿನ ಆಲಡ್ಕದಲ್ಲಿ12 ಮನೆಗಳಿಗೆ ನದಿ ನೀರು ನುಗ್ಗಿದೆ.

ನೀರು ನುಗ್ಗಿರುವ ಹನ್ನೆರಡು ಮನೆಗಳ ಜನರನ್ನು ಜಿಲ್ಲಾಡಳಿತ ಸ್ಥಳಾಂತರ ಮಾಡಿದ್ದು ಸ್ಥಳಕ್ಕೆ ಮಂಗಳೂರು ಸಹಾಯಕ ಆಯುಕ್ತ ಹರ್ಷವರ್ಧನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನೀರು ನುಗ್ಗಿರುವ ಪ್ರದೇಶದಲ್ಲಿರುವ ಇನ್ನುಳಿದ ಐದು ಮನೆಗಳ ಸ್ಥಳಾಂತರಕ್ಕೆ ಕ್ರಮ ವಹಿಸಲಾಗಿದ್ದು, ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗುತ್ತಿದೆ.

ಇಂದು ಬೆಳಗ್ಗೆ ಆಲಡ್ಕದಲ್ಲಿ ಮೈದಾನಕ್ಕೆ ನುಗ್ಗಿದ್ದ ನೀರು ನದಿಯಲ್ಲಿ ನೀರಿನ ಮಟ್ಟ ಏರಿಕೆಯಾದ ಹಿನ್ನೆಲೆಯಲ್ಲಿ ಮನೆಗಳಿಗೂ ನುಗ್ಗಿದೆ.

- Advertisement -

Latest News

error: Content is protected !!