Saturday, May 18, 2024
Homeಕರಾವಳಿಅಪಾಯದ ಮಟ್ಟದಲ್ಲಿ ಹರಿಯುತ್ತಿದೆ ನೇತ್ರಾವತಿ; ಹಲವಾರು ಪ್ರದೇಶಗಳಿಗೆ ಎದುರಾಗಿದೆ ಪ್ರವಾಹ ಭೀತಿ

ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ ನೇತ್ರಾವತಿ; ಹಲವಾರು ಪ್ರದೇಶಗಳಿಗೆ ಎದುರಾಗಿದೆ ಪ್ರವಾಹ ಭೀತಿ

spot_img
- Advertisement -
- Advertisement -

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಹರಿಯುತ್ತಿರುವ ನೇತ್ರಾವತಿ ನದಿ ಅಪಾಯದ ಮಟ್ಟಕ್ಕೆ ತಲುಪಿದೆ. ಸ್ಥಳೀಯ ಪ್ರದೇಶಗಳಾದ ಬಡ್ಡಕಟ್ಟೆ, ಬಸ್ತಿಪಡ್ಪು, ಆಲಡ್ಕ ಹಾಗು ನಾವೂರು ಸಹಿತ ಹಲವಾರು ಪ್ರದೇಶಗಳಿಗೆ ಪ್ರವಾಹದ ಭೀತಿ ಎದುರಾಗಿದೆ.

ಕಳೆದ 11 ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬಂಟ್ವಾಳ ತಾಲೂಕಿನಲ್ಲಿ ಹರಿಯುತ್ತಿರುವ ನೇತ್ರಾವತಿ ನದಿ ಅಪಾಯದ ಮಟ್ಟ ತಲುಪಿದೆ. ಇದರಿಂದಾಗಿ ನೆರೆ ಭೀತಿ ಎದುರಾಗಿದ್ದು ಇಂದು ಬೆಳಗ್ಗೆ 8.4 ಮೀಟರ್ ಎತ್ತರದಲ್ಲಿ ನದಿ ಹರಿಯುತ್ತಿತ್ತು. ನದಿಯ ಅಪಾಯದ ಮಟ್ಟ 8.5 ಮೀಟರ್​ ಆಗಿದೆ.

ಇನ್ನು ವರುಣನ ಆರ್ಭಟಕ್ಕೆ ಅದ್ಯಪಾಡಿ ಭಾಗದ ಸುಮಾರು 35 ಮನೆಗಳು, ತೋಟ, ಎಕರೆಗಟ್ಟಲೆ ಕೃಷಿ ಭೂಮಿ ಜಲಾವೃತವಾಗಿದ್ದು, ಕಳೆದ 10 ದಿನಗಳಿಂದ ಮಂಗಳೂರು ತಾಲೂಕಿನ ಅದ್ಯಪಾಡಿ ಪ್ರದೇಶದ ಜನತೆ ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮರವೂರಿನಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣದ ಬಳಿಕ ಇಲ್ಲಿನ ಜನತೆ ಪ್ರತಿ ವರ್ಷ ಈ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ ಎನ್ನಲಾಗಿದೆ.

ಅದ್ಯಪಾಡಿ ಹಾಗೂ ಮೂಡುಕೆರೆ ಗ್ರಾಮದಲ್ಲಿ ಮರವೂರಿನಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣದ ಬಳಿಕ ಸಮಸ್ಯೆ ತಲೆದೋರಿದ್ದು, 10-15 ದಿನಗಳಾದರೂ ನೆರೆ ಇಳಿಮುಖವಾಗುವುದಿಲ್ಲ. ಇನ್ನು ತುರ್ತು ಸೇವೆ, ಅಗತ್ಯ ವಸ್ತುಗಳ ಪೂರೈಕೆಗೆ ದೋಣಿಯನ್ನೇ ಅವಲಂಬಿಸಬೇಕು. ಇಲ್ಲಿನ ಜನತೆ ಕೃಷಿ ನಂಬಿ ಬದುಕುತ್ತಿದ್ದು, ಕೃಷಿಭೂಮಿಯಲ್ಲಿ ನೀರು ನಿಂತು ಸಂಪೂರ್ಣ ಬೆಳೆ ಹಾನಿಯಾಗುತ್ತಿದೆ.

- Advertisement -
spot_img

Latest News

error: Content is protected !!