Tuesday, May 14, 2024
Homeಕರಾವಳಿಕೂಕ್ರಬೆಟ್ಟು: ಶಾಲಾ ಬಸ್‌ ಆರಂಭೋತ್ಸವ

ಕೂಕ್ರಬೆಟ್ಟು: ಶಾಲಾ ಬಸ್‌ ಆರಂಭೋತ್ಸವ

spot_img
- Advertisement -
- Advertisement -

ಬೆಳ್ತಂಗಡಿ: ಬಂಟ್ವಾಳದ ದಡ್ಡಲಕಾಡು ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್‌ ದತ್ತು ಯೋಜನೆಯಡಿ ಮರೋಡಿ ಗ್ರಾಮದ ಕೂಕ್ರಬೆಟ್ಟು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನೀಡಿರುವ ಶಾಲಾ ಬಸ್‌ನ ಆರಂಭೋತ್ಸವ ಕೂಕ್ರಬೆಟ್ಟು ಶಾಲೆಯಲ್ಲಿ ಸೋಮವಾರ ನಡೆಯಿತು.

ಕೂಕ್ರಬೆಟ್ಟು ಸರ್ಕಾರಿ ಶಾಲೆ ಉಳಿಸಿ ಬೆಳೆಸಿ ಸಮಿತಿಯ ಅಧ್ಯಕ್ಷ ಜಯಂತ ಕೋಟ್ಯಾನ್ ಶಾಲಾ ಬಸ್‌ಗೆ ಚಾಲನೆ ನೀಡಿ ಮಾತನಾಡಿ, ‘ಸರ್ಕಾರಿ ಶಾಲೆ ಉಳಿಸಿ ಬೆಳೆಸಿ ಸಮಿತಿ ರಾಜ್ಯಾಧ್ಯಕ್ಷ ಪ್ರಕಾಶ್‌ ಅಂಚನ್‌ ಅವರು ನಮ್ಮ ಶಾಲೆಗೆ ಬಸ್‌ ಕೊಡುಗೆ ನೀಡಿದ್ದಾರೆ. ಸರ್ಕಾರಿ ಶಾಲೆಯ ಮಕ್ಕಳು ಕೂಡ ಶಾಲಾ ಬಸ್‌ನಲ್ಲಿ ಬರುವಂತಾಗಬೇಕು. ಗ್ರಾಮೀಣ ಮಕ್ಕಳ ಸಮಸ್ಯೆಯನ್ನು ತಿಳಿದು ಬಸ್‌ ಅನ್ನು ಓಡಿಸಲಾಗಿದೆ. ಇದರ ಪ್ರಯೋಜನವನ್ನು ವಿದ್ಯಾರ್ಥಿಗಳು ಪಡೆಯಬೇಕು’ ಎಂದು ಹೇಳಿದರು.

ಮೂರು ವರ್ಷದ ಹಿಂದೆ ಕೇವಲ 16 ಮಕ್ಕಳಿದ್ದು, ಮುಚ್ಚುವ ಹಂತದಲ್ಲಿದ್ದ ಈ ಸರ್ಕಾರಿ ಶಾಲೆಯಲ್ಲಿ ಇಂದು 140ಕ್ಕೂ ಅಧಿಕ ಮಕ್ಕಳು ಕಲಿಯುತ್ತಿದ್ದಾರೆ. ಶಾಲೆಯ ನೂತನ ಕಟ್ಟಡಕ್ಕೆ ಅನುದಾನ ಮಂಜೂರಾಗಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ದೊರೆಯಲಿದೆ. ಹಂತಹಂತವಾಗಿ ಶಾಲೆಗೆ ಮೂಲಸೌಕರ್ಯ ಕಲ್ಪಿಸಲು ಪ್ರಯತ್ನಿಸಲಾಗುತ್ತಿದೆ’ ಎಂದರು.

ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಯಶೋಧರ ಬಂಗೇರ, ಉಪಾಧ್ಯಕ್ಷ ಯೋಗೇಂದ್ರ ಆಚಾರ್ಯ, ಮಾಜಿ ಅಧ್ಯಕ್ಷ ರಾಜುಪೂಜಾರಿ, ಮರೋಡಿ ಗ್ರಾಮ ಪಂಚಾಯಿತಿ ಸದಸ್ಯ ಅಶೋಕ ಪೂಜಾರಿ, ಶಾಲಾ ಮುಖ್ಯಶಿಕ್ಷಕಿ ಸುಫಲಾ, ಅಕ್ಷರ ದಾಸೋಹ ಸಿಬ್ಬಂದಿ ವಿನೋದಾ, ವಿದ್ಯಾರ್ಥಿ ನಾಯಕಿ ಶೃತಿಕಾ ಮತ್ತಿತರರು ಉಪಸ್ಥಿತರಿದ್ದರು.

ಮೊದಲು ಮರೋಡಿ ಉಮಾಮಹೇಶ್ವರ ದೇವಸ್ಥಾನದಲ್ಲಿ ಬಸ್ ಗೆ ಪೂಜೆ ಸಲ್ಲಿಸಲಾಯಿತು.

- Advertisement -
spot_img

Latest News

error: Content is protected !!