ಮಂಗಳೂರಿನಲ್ಲಿ ಮಾರಕ ಕೊರೋನಾ ವೈರಸ್ ಅಬ್ಬರ ಮುಂದುವರೆದಿದ್ದು, ಇಂದು ನಗರದ ಬೋಳೂರು ಪರಿಸರದ 58 ವರ್ಷದ ಮಹಿಳೆಗೆ ಕೊರೊನ ಪಾಸಿಟಿವ್ ದೃಢಪಟ್ಟಿದೆ. ಇವರು ಕಳೆದ ಕೆಲವು ದಿನಗಳ ಹಿಂದೆ ನಗರದ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ರೋಗಿ ಸಂಖ್ಯೆ 501 ಕೊರೊನ ಸೋಂಕಿತ ಸ್ವಚ್ಛತಾ ಸಿಬ್ಬಂದಿ ಸಂಪರ್ಕಕ್ಕೆ ಬಂದಿದ್ದರು ಎನ್ನಲಾಗಿದೆ.
ಮುನ್ನೆಚ್ಚರಿಕೆಯ ಕ್ರಮವಾಗಿ ಬೋಳೂರು ಪರಿಸರದ ಅವರ ಮನೆಯ ಸುತ್ತಮುತ್ತ ಸೀಲ್ ಡೌನ್ ಮಾಡಲಾಗಿದೆ,ಪೊಲೀಸರು ಅಲ್ಲಲ್ಲಿ ಬ್ಯಾರಿಕೇಡ್ ಗಳನ್ನು ಅಳವಡಿಸಿ ಬುಧವಾರ ಸಂಜೆಯಿಂದ ಸಾರ್ವಜನಿಕ ಸಂಚಾರವನ್ನು ನಿರ್ಬಂಧಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಕಳೆದ ಎರಡು ದಿನಗಳಿಂದ ಯಾವುದೇ ಕೊರೊನಾ ಪ್ರಕರಣಗಳಿಲ್ಲದೆ ಕೊಂಚ ನೆಮ್ಮದಿಯಾಗಿತ್ತು , ಆದರೆ ಇಂದು ಕಂಡು ಬಂದ ಪಾಸಿಟಿವ್ ಪ್ರಕರಣ ಜನತೆಯ ಆತಂಕ ಹೆಚ್ಚಿಸುವಂತೆ ಮಾಡಿದೆ.
ಕರ್ನಾಟಕ ರಾಜ್ಯದಲ್ಲಿ ಇಂದು 22 ಹೊಸ ಪ್ರಕರಣಗಳು ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 557 ಕ್ಕೆ ಏರಿದೆ.