- Advertisement -
- Advertisement -
ಮಂಗಳೂರು: ಕೊರೋನಾ ವೈರಸ್ ನ ಕಾರಣದಿಂದ ಮಹಿಳೆಯೊಬ್ಬರು ಸಾವನ್ನಪ್ಪಿದ ಸುದ್ದಿಯಿಂದ ಆಘಾತದಲ್ಲಿರುವ ದಕ್ಷಿಣ ಕನ್ನಡದಲ್ಲಿ ಮತ್ತೊಂದು ಸೋಂಕು ಪ್ರಕರಣ ಪಾಸಿಟಿವ್ ಆಗಿದೆ. ಎ.16ರಂದು ಪಾಸಿಟಿವ್ ಆಗಿದ್ದ ಉಪ್ಪಿನಂಗಡಿ ನಿವಾಸಿಯ ಪತ್ನಿಗೆ ಸೋಂಕು ತಾಗಿದ್ದು ದೃಢವಾಗಿದೆ.
P325 (ರೋಗಿ ಸಂಖ್ಯೆ) ಎಂದು ಗುರುತಿಸಲಾಗಿದ್ದ ಉಪ್ಪಿನಂಗಡಿ ಮೂಲದ ವ್ಯಕ್ತಿಯ ಸಂಪರ್ಕದಿಂದ ಆತನ ಪತ್ನಿಗೆ ಕೋವಿಡ್-19 ಸೋಂಕು ಪತ್ತೆಯಾಗಿದೆ. 30 ವರ್ಷ ವಯಸ್ಸಿನ ಮಹಿಳೆಗೆ ಸೋಂಕು ಕಂಡು ಬಂದ ಹಿನ್ನಲೆ ಜಿಲ್ಲೆಯ ಕೋವಿಡ್ ಆಸ್ಪತ್ರೆ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 15ಕ್ಕೇರಿದೆ. ಇದರಲ್ಲಿ 12 ಮಂದಿ ಡಿಸ್ಚಾರ್ಜ್ ಆಗಿದ್ದು, ಒಬ್ಬರು ಇಂದು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 390ಕ್ಕೇರಿದೆ. ಇದರಲ್ಲಿ ಒಟ್ಟು 16 ಸೋಂಕಿತರು ಸಾವನ್ನಪ್ಪಿದ್ದಾರೆ. 111 ಮಂದಿ ಗುಣಮುಖರಾಗಿದ್ದಾರೆ.
- Advertisement -