Sunday, June 7, 2026
Homeತಾಜಾ ಸುದ್ದಿನೂತನ ಸಿಎಂ ಜೊತೆಗೆ ಮೂವರು ಉಪಮುಖ್ಯಮಂತ್ರಿಗಳ ಘೋಷಣೆ

ನೂತನ ಸಿಎಂ ಜೊತೆಗೆ ಮೂವರು ಉಪಮುಖ್ಯಮಂತ್ರಿಗಳ ಘೋಷಣೆ

- Advertisement -
- Advertisement -

ಬೆಂಗಳೂರು : ಕರ್ನಾಟಕ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾದ ನಂತ್ರ, ನೂತನ ಉಪ ಮುಖ್ಯಮಂತ್ರಿಗಳಾಗಿ ಆರ್ ಅಶೋಕ್, ಬಿ.ಶ್ರೀರಾಮುಲು ಹಾಗೂ ಗೋವಿಂದ ಕಾರಜೋಳ ಅವರನ್ನು ಆಯ್ಕೆ ಮಾಡಲಾಗಿದೆ.

ಮುಖ್ಯಮಂತ್ರಿ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ರಾಜೀನಾಮೆ ನೀಡಿದ ನಂತ್ರ, ಈಗ ಕರ್ನಾಟಕ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿಯನ್ನು ಇಂದಿನ ಬಿಜೆಪಿ ಸಂಸದೀಯ ಮಂಡಳಿಯ ಸಭೆಯಲ್ಲಿ ಒಕ್ಕೊರಲಿನಿಂದ ಘೋಷಣೆ ಮಾಡಲಾಗಿದೆ. ಈ ಮೂಲಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿಯವರು ನೇಮಕಗೊಂಡಿದ್ದಾರೆ. ಈ ಕುರಿತಂತೆ ಸಂಸದೀಯ ಮಂಡಳಿಯ ಸಭೆಯಲ್ಲಿ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ.

ಲಿಂಗಾಯಿತ ಸಿಎಂ ಆಗಿರುವುದರಿಂದ ಒಕ್ಕಲಿಗರು, ದಲಿತರು ಮತ್ತು ವಾಲ್ಮೀಕಿ ಸಮುದಾಯಕ್ಕೆ ಉಪಮುಖ್ಯಮಂತ್ರಿ ಸ್ಥಾನ ಘೋಷಣೆ ಮಾಡಲಾಗಿದೆ.

- Advertisement -

Latest News

error: Content is protected !!