Thursday, June 4, 2026
Homeತಾಜಾ ಸುದ್ದಿಮುಂದಿನ ಶೈಕ್ಷಣಿಕ ವರ್ಷದಿಂದ 20 ಸಾವಿರ ಶಾಲೆಗಳಲ್ಲಿ ಹೊಸ ಶಿಕ್ಷಣ ನೀತಿ ಜಾರಿ- ಸಚಿವ ಬಿ.ಸಿ....

ಮುಂದಿನ ಶೈಕ್ಷಣಿಕ ವರ್ಷದಿಂದ 20 ಸಾವಿರ ಶಾಲೆಗಳಲ್ಲಿ ಹೊಸ ಶಿಕ್ಷಣ ನೀತಿ ಜಾರಿ- ಸಚಿವ ಬಿ.ಸಿ. ನಾಗೇಶ್

- Advertisement -
- Advertisement -

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ 20,000 ಶಾಲೆಗಳಲ್ಲಿ ಹೊಸ ಶಿಕ್ಷಣ ನೀತಿ ಜಾರಿಗೊಳಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಮುಂದಿನ ಶೈಕ್ಷಣಿಕ ವರ್ಷದಿಂದ 20 ಸಾವಿರ ಶಾಲೆಗಳಲ್ಲಿ ಹೊಸ ಶಿಕ್ಷಣ ನೀತಿ ಜಾರಿಗೊಳಿಸಲಿದ್ದು, ಇದಕ್ಕೆ ಕಲಬುರ್ಗಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ ಎಂದರು.

ಇನ್ನು ಹೊಸ ಶಿಕ್ಷಣ ನೀತಿ ಜಾರಿಯಾಗುವುದರಿಂದ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರು 9, 10, 11, 12 ನೇ ತರಗತಿಗಳಿಗೆ ಕೂಡ ಪಾಠ ಮಾಡುವ ಜವಾಬ್ದಾರಿ ಹೊರಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ಹೊಸ ಶಿಕ್ಷಣ ನೀತಿ ಜಾರಿಗೊಳಿಸುವುದರಿಂದ 9, 10 ನೇ ತರಗತಿಯಿಂದಲೇ ಪದವಿ ಪೂರ್ವ ಶಿಕ್ಷಣಕ್ಕೆ ಪೂರಕವಾಗುವಂತೆ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸಲು ಅನುಕೂಲವಾಗುತ್ತದೆ ಎಂದು ಹೇಳಿದ್ದಾರೆ.

- Advertisement -

Latest News

error: Content is protected !!